ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.   

Written by - Prashobh Devanahalli | Last Updated : Jan 22, 2025, 07:41 PM IST
  • ಅನುದಾನವಿಲ್ಲದೆ ಶಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎನ್ನುತ್ತಿದ್ದಾರೆ
  • ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ
  • ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ
ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ title=

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದಾಯದಲ್ಲಿ ಶೇ.20 ರಷ್ಟು ಇಳಿಕೆಯಾಗಿದೆ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿಯೇ ಹೇಳಿದ್ದಾರೆ. ಈ ಬಜೆಟ್‌ನಲ್ಲಿ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲು ಸರ್ಕಾರ ಮುಂದಾಗಿದೆ.  ಬಿಜೆಪಿ ಅಧಿಕಾರದಲ್ಲಿದ್ದಾಗ ಸಾಲ ಪಡೆಯದೆ ಹೆಚ್ಚುವರಿ ಬಜೆಟ್‌ ಮಾಡಲಾಗಿತ್ತು. ಕಾಂಗ್ರೆಸ್‌ ಬಂದ ನಂತರ ಕರ್ನಾಟಕ ಸಾಲ ರಾಜ್ಯವಾಗಿ ಪರಿವರ್ತನೆಯಾಗಿದೆ ಎಂದರು.

ಇದನ್ನೂ ಓದಿ: Jalgaon Train Accident: ಕರ್ನಾಟಕ ಎಕ್ಸ್‌ಪ್ರೆಸ್ ದುರಂತ.. ಪ್ರಯಾಣಿಕರ ಮೇಲೆ ಹರಿದ ರೈಲು! 

ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ತರಲಿದ್ದಾರೆ. ಸಿದ್ದರಾಮಯ್ಯ ಹೊರ ನಡೆಯುವ ಮುಖ್ಯಮಂತ್ರಿಯಾಗಿರುವುದರಿಂದ ಅವರಿಗೆ ಯಾವುದೇ ಚಿಂತೆ ಇಲ್ಲ. ಕೆಲವು ಶಾಸಕರು ಅನುದಾನವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಭೆಯಲ್ಲೇ ಈ ಕುರಿತು ಜಗಳ ನಡೆದಿದೆ ಎಂದರು. 

ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ. ಸ್ವತಃ ಕಾಂಗ್ರೆಸ್‌ ಶಾಸಕರೇ ಅದನ್ನು ಹೇಳಿದ್ದಾರೆ. ಇದರ ಜೊತೆಗೆ ಬ್ಯಾಂಕ್‌ ದರೋಡೆ, ಹಸುವಿನ ಕೆಚ್ಚಲು ಕತ್ತರಿಸುವುದು, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ನಡೆಯುತ್ತಲೇ ಇವೆ. ಇಷ್ಟೆಲ್ಲ ಆದರೂ ಬೆಳಗಾವಿಯಲ್ಲಿ ಸಮಾವೇಶ ನಡೆಸಲು ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆ ಮೂಡುತ್ತದೆ. ಭ್ರಷ್ಟಾಚಾರದಿಂದ ವಸೂಲಿ ಮಾಡಿದ ಹಣವನ್ನು ಆ ಸಮಾವೇಶಕ್ಕೆ ಬಳಸಲಾಗಿದೆ. ಈಗ ದರ ಏರಿಕೆ ಮಾಡಿ ಜನರ ಮೇಲೆ ಮತ್ತಷ್ಟು ಹೊರೆ ಹೇರಿದ್ದಾರೆ. ಮೊದಲಿಗೆ ಯಾವುದೇ ತೆರಿಗೆ ಹೇರಲ್ಲ ಎಂದು ಹೇಳಿ, ಬಳಿಕ ಜನರ ತಲೆ ಮೇಲೆ ಹೊರೆ ಹಾಕಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Karnataka State Film Awards: 2019 ರ ಚಲನ ಚಿತ್ರ ಪ್ರಶಸ್ತಿ ಪ್ರಕಟ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News