ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ

Eshwar Khandre: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

Written by - Savita M B | Last Updated : Dec 31, 2024, 04:49 PM IST
  • • ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು
  • • ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ – ಈಶ್ವರ ಖಂಡ್ರೆ
ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ title=

ಬೆಂಗಳೂರು, ಡಿ.31:ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.

ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು,  ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News