ತುಮಕೂರು: ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದ್ಜಿಸುತ್ತಿರುವ ಶ್ರೀರಾಮುಲು ಪರ ಪ್ರಚಾರ ಮಾಡಲು ಗಾಲಿ ಜನಾರ್ಧನ ರೆಡ್ಡಿ ಮುಂದಾಗಿದ್ದಾರೆ.
ಅಕ್ರಮ ಗಣಿಗರಿಕೆ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಪ್ರಚಾರ ಆರಂಭಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, "ಬಸವ ಜಯಂತಿ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದು, ಇಂದಿನಿಂದ ನನ್ನ ಸ್ನೇಹಿತ ಶ್ರೀರಾಮುಲು ಪರ ಪ್ರಚಾರ ಮಾಡುತ್ತೇನೆ. ಬಳ್ಳಾರಿಗೆ ಪ್ರವೇಶ ಇಲ್ಲದ ಕಾರಣ ಎರಡು ಜಿಲ್ಲೆಯ ಗಡಿ ಗ್ರಾಮವಾಗಿರುವ ರಾಮಪುರದಲ್ಲಿದ್ದುಕೊಂಡೇ ಚಿತ್ರದುರ್ಗ, ಬಳ್ಳಾರಿಯಲ್ಲಿ ಪ್ರಚಾರ ಮಾಡುತ್ತೇನೆ. ಈ ಬಾರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಖಚಿತ" ಎಂದರು.
ಎರಡು ದಿನಗಳ ಹಿಂದಷ್ಟೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮಾತನಾಡಿ, ಬಿಜೆಪಿಗೂ ಜನಾರ್ಧನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ಆದರೆ, ಇದು ಜನಾರ್ಧನ ರೆಡ್ಡಿ ಅವರು, ಬಿಜೆಪಿ ಅಭ್ಯರ್ಥಿ ಹಾಗು ಸ್ನೇಹಿತ ಶ್ರೀರಾಮುಲು ವಿರುದ್ಧ ಪ್ರಚಾರಕ್ಕೆ ಮುಂದಾಗಿರುವುದು ಅಚ್ಚರಿ ಮೂಡಿಸಿದೆ.