ನವದೆಹಲಿ :ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಎಸ್ಸಿ/ಎಸ್ಟಿ ವರ್ಗಕ್ಕೆ ಶೇ.90 ಸಹಾಯಧನ ನೀಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಂಸದ ಡಾ.ಕೆ.ಸುಧಾಕರ್ ಅವರು,ದ್ರಾಕ್ಷಿ ಬೆಳೆಗಾರರ ಸಂಕಷ್ಟಗಳ ಬಗ್ಗೆ ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಕುರಿತು ಪ್ರಶ್ನೆಗಳಿಗೆ ದ್ರಾಕ್ಷಿ ಬೆಳೆಗಾರರು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಅಪಾರ ನಷ್ಟ ಅನುಭವಿಸಿದ್ದಾರೆ.ಈ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ಹಳ್ಳ ಹಿಡಿದ ಸಿಎಂ ಸಿದ್ದರಾಮಯ್ಯರ ಕನಸಿನ ಇಂದಿರಾ ಕ್ಯಾಂಟೀನ್ ಯೋಜನೆ!
ಈ ಕುರಿತು ಉತ್ತರ ನೀಡಿರುವ ಸಚಿವಾಲಯ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ, ಸಾಮಾನ್ಯ ವರ್ಗದ ಬೆಳೆಗಾರರಿಗೆ ಹೆಕ್ಟೇರ್ಗೆ ಗರಿಷ್ಠ 24,000 ರೂ. ಹಾಗೂ ಎಸ್ಸಿ/ಎಸ್ಟಿ ಗೆ ಹೆಕ್ಟೇರ್ಗೆ ಗರಿಷ್ಠ 30,000 ರೂ. ಗೊಬ್ಬರ ಸಹಾಯಧನ ನೀಡಲಾಗುತ್ತಿದೆ.ಜೊತೆಗೆ ಪೌಷ್ಠಿಕಾಂಶ ಹಾಗೂ ರೋಗ ನಿಯಂತ್ರಣಕ್ಕಾಗಿ ಹೆಕ್ಟೇರ್ಗೆ ಗರಿಷ್ಠ 2,000 ರೂ. ನೀಡಲಾಗುತ್ತಿದೆ.ಕೀಟನಾಶಕ ಮತ್ತು ಗೊಬ್ಬರ ಸಿಂಪಡಣೆಗಾಗಿ ಯಂತ್ರ ಖರೀದಿಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ 76,000 ರೂ. ಹಾಗೂ ಎಸ್ಸಿ/ಎಸ್ಟಿ ಗೆ ಗರಿಷ್ಠ 95,000 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
2021-22 ಹಾಗೂ 2022-23 ನೇ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ರೋಗಗಳಿಂದಾಗಿ ದ್ರಾಕ್ಷಿ ಬೆಳೆ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 2022-23 ರಲ್ಲಿ ಚಿಕ್ಕಬಳ್ಳಾಪುರದಲ್ಲಿ 568 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 13,113 ಟನ್ ಉತ್ಪಾದನೆಯಾಗಿದೆ. ಇದೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 1,712 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 43,086 ಟನ್ ದ್ರಾಕ್ಷಿ ಉತ್ಪಾದನೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ :ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ!
ಬೆಳೆಗಾರರು ನಷ್ಟ ಪರಿಹಾರ ಪಡೆಯಲು, ಹವಾಮಾನ ಆಧಾರಿತ ಬೆಳೆ ಬಿಮೆ ಯೋಜನೆಗೆ (RWBCIS) ಹೆಸರು ನೋಂದಾಯಿಸಲು ಸಲಹೆ ನೀಡಲಾಗುತ್ತಿದೆ. ಈ ಯೋಜನೆಯಡಿ, ಶೇ.5 ರಷ್ಟು ಅಂದರೆ ಹೆಕ್ಟೇರ್ಗೆ 14,000 ರೂ. ವಿಮೆ ಪಾವತಿಸಬೇಕು. ನಷ್ಟವಾದಾಗ ಹೆಕ್ಟೇರ್ಗೆ 2.80 ಲಕ್ಷ ರೂ.ಪರಿಹಾರ ಸಿಗಲಿದೆ ಎಂದು ಸಚಿವಾಲಯ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.