ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಚರ್ಚೆ

ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪರಿಸರ ಸ್ನೇಹಿಯಾಗಿಸಬೇಕು ಮತ್ತು ಜನಪ್ರಿಯಗೊಳಿಸಬೇಕು. ಆದ್ರೆ ಈ ರೀತಿ ದರ ಏರಿಕೆ ಮಾಡಿರುವುದರಿಂದ ಆ ಉದ್ದೇಶಕ್ಕೆ ಹಿನ್ನಡೆ ಉಂಟಾಗಿದೆ  ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.   

Written by - Prashobh Devanahalli | Last Updated : Feb 11, 2025, 03:08 PM IST
  • ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ
  • ಮೆಟ್ರೋ ಪ್ರಯಾಣ ದರಗಳ ಹೆಚ್ಚಳದ ಬಗ್ಗೆ ಚರ್ಚೆ
  • ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸಿದ ತೇಜಸ್ವಿ ಸೂರ್ಯ
ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಚರ್ಚೆ  title=

ನವದೆಹಲಿ : ಸಂಸತ್ತಿಯ ಶೂನ್ಯ ವೇಳೆಯಲ್ಲಿ ಬೆಂಗಳೂರಿನ ಮೆಟ್ರೋ ಪ್ರಯಾಣ ದರಗಳ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ. ಸಂಸದ ತೇಜಸ್ವಿ ಸೂರ್ಯ ಈ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಮೆಟ್ರೋ ದರ ಏರಿಕೆ ಕಾರಣದಿಂದ  ಮಧ್ಯಮ ವರ್ಗದ ಜನತೆಗೆ ಆಗುತ್ತಿರುವ ಆರ್ಥಿಕ ಹೊರೆ ಬಗ್ಗೆ ಪ್ರಸ್ತಾಪಿಸಲಾಯಿತು.

ಬೆಂಗಳೂರಿನಲ್ಲಿ ಒಂದು ನಿಲ್ದಾಣದಿಂದ ಇನ್ನೊಂದು ನಿಲ್ದಾಣ ಹೀಗೆ ಅಲ್ಪ ದೂರದ ಪ್ರಯಾಣ ದರ ಶೇ.100ರಷ್ಟು ಏರಿಕೆಯಾಗಿದೆ. ಈ ರೀತಿಯ ದರ ಏರಿಕೆಯನ್ನು ದೇಶದ ಇತರ ನಗರಗಳ ಮೆಟ್ರೋ ದರಕ್ಕೆ ಹೋಲಿಸಿ  ನೋಡಿದರೆ ಅತ್ಯಂತ ದುಬಾರಿಯಾಗಿದೆ ಎಂದು ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ.  ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಪರಿಸರ ಸ್ನೇಹಿಯಾಗಿಸಬೇಕು ಮತ್ತು ಜನಪ್ರಿಯಗೊಳಿಸಬೇಕು. ಆದ್ರೆ ಈ ರೀತಿ ದರ ಏರಿಕೆ ಮಾಡಿರುವುದರಿಂದ ಆ ಉದ್ದೇಶಕ್ಕೆ ಹಿನ್ನಡೆ ಉಂಟಾಗಿದೆ ಎಂದಿದ್ದಾರೆ. 

ಇದನ್ನೂ ಓದಿ :  ಕಾಂಗ್ರೆಸ್‌ ಸರ್ಕಾರ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಜನಸಾಮಾನ್ಯರ ಪ್ರಯಾಣ ಅನುಭವವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ  ಮೆಟ್ರೋ ದರ ಏರಿಕೆಯನ್ನು ಪುನರ್ ಪರಿಶೀಲಿಸಬೇಕು ಎಂದು ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಭದ್ರತೆ ಹಾಗೂ ವ್ಯವಹಾರಿಕತೆಯನ್ನು ಗಮನದಲ್ಲಿಟ್ಟುಕೊಂಡು ದರ ಪರಿಷ್ಕರಣೆ ಅಗತ್ಯ ಎಂದು ಸಂಸದರು ಪ್ರತಿಪಾದಿಸಿದರು. 

ಇದನ್ನೂ ಓದಿ :  ಬಿಜೆಪಿ ತಮಗೆ ಬೇಕಾದ ಕಡೆ EVM ಮೂಲಕ ಗೆಲ್ಲುತ್ತದೆ: ಶಿವರಾಜ ತಂಗಡಗಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News