ರಾಜಕೀಯ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ:ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ :ಜಿ.ಪರಮೇಶ್ವರ್ ಸ್ಪಷ್ಟನೆ

ರಾಜಕೀಯ ವಿಚಾರದ ಬಗ್ಗೆ ಯಾವುದನ್ನು ಅವರೊಂದಿಗೆ ಮಾತನಾಡಿಲ್ಲ. ಇದರಲ್ಲಿ ಮುಚ್ಚಿಡುವಂಥದ್ದು ಏನು ಇಲ್ಲ. ಜನ ಸಮುದಾಯಕ್ಕೆ ಗೊತ್ತಾಗುವಂತ ವಿಚಾರಗಳೇ ರಾಜಕೀಯ. ಮುಚ್ಚಿಡುವಂಥ ವಿಚಾರಗಳು ಏನು ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.  

Written by - Prashobh Devanahalli | Edited by - Ranjitha R K | Last Updated : Feb 20, 2025, 12:17 PM IST
  • ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ
  • ಹೊಸ ಕಚೇರಿ ನೋಡಲು ಹೋಗಿದ್ದೆ
  • ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ರಾಜಕೀಯ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ:ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ :ಜಿ.ಪರಮೇಶ್ವರ್ ಸ್ಪಷ್ಟನೆ title=

ಬೆಂಗಳೂರು : ಖಾಸಗಿ ಕೆಲಸಗಳಿಗಾಗಿ ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಾನು ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹೊಸ ಕಚೇರಿ ನೋಡಲು ಹೋಗಿದ್ದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದೇನೆ. ಅವರನ್ನು ಹೊರತುಪಡಿಸಿ ಬೇರೆ ಯಾರನ್ನು ಭೇಟಿ ಮಾಡಿಲ್ಲ. ರಾಜಕೀಯದ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಜಕೀಯ ವಿಚಾರದ ಬಗ್ಗೆ ಯಾವುದನ್ನು ಅವರೊಂದಿಗೆ ಮಾತನಾಡಿಲ್ಲ. ಇದರಲ್ಲಿ ಮುಚ್ಚಿಡುವಂಥದ್ದು ಏನು ಇಲ್ಲ. ಜನ ಸಮುದಾಯಕ್ಕೆ ಗೊತ್ತಾಗುವಂತ ವಿಚಾರಗಳೇ ರಾಜಕೀಯ. ಮುಚ್ಚಿಡುವಂಥ ವಿಚಾರಗಳು ಏನು ಇಲ್ಲ ಎಂದರು.

ಇದನ್ನೂ ಓದಿ : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ!

ನಾನು ಒಂದು ವೇಳೆ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿದ್ದರೆ, ಆ ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಇರಬಹುದು ಅಥವಾ ಮುಖ್ಯಮಂತ್ರಿ ವಿಚಾರ ಇರಬಹುದು ಯಾವುದನ್ನು ಎಲ್ಲಿಯೂ ಮಾತನಾಡಿಲ್ಲ. ಇದು ನಿಮ್ಮ‌ ಗಮನಕ್ಕೆ ಇರಲಿ. ಶೋಷಿತ ಸಮಾವೇಶದ ಬಗ್ಗೆಯೂ ಮಾತನಾಡಿಲ್ಲ. ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ. ಆ ರೀತಿ ಅಜೆಂಡಾಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದೆ ಎಂಬುದನ್ನು ಸ್ಪಷ್ಟಿಕರಣ ನೀಡಲು ಬಯಸುತ್ತೇನೆ ಎಂದು ಹೇಳಿದರು.

ಮುಡಾ‌ ಪ್ರಕರಣವನ್ನು ಲೋಕಾಯುಕ್ತ ತನಿಖೆ‌ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಬಿಐಗೆ ಕೊಡುವ ಅಗತ್ಯವಿಲ್ಲ. ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ‌ ಮಾಡುವುದು ಆಗಬಾರದು. ಇದು ಕಾನೂನಿಗೆ ವಿರುದ್ಧ ಎಂಬುದನ್ನು ಹೈಕೋರ್ಟ್ ಹೇಳಿದೆ. ಬಿಜೆಪಿಯವರು ಲೋಕಾಯುಕ್ತ ತನಿಖೆಯನ್ನೇ ಪ್ರಶ್ನಿಸುತ್ತಿದ್ದಾರೆ. ತನಿಖೆಯಲ್ಲಿ ಸಿಕ್ಕಿದ್ದ ಸಾಕ್ಷ್ಯಾಧಾರಗಳ ಮೇಲೆ ತೀರ್ಮಾನ ಮಾಡಿದ್ದಾರೆ. ಸಾಕ್ಷ್ಯಾ, ಪುರಾವೆಗಳಿಲ್ಲ‌ ಎಂದ ಮೇಲೆ ತೀರ್ಪು ಕೊಟ್ಟಿದ್ದಾರೆ. ಲೋಕಾಯುಕ್ತ ತನಿಖೆಯನ್ನು ಪ್ರಶ್ನಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಬಿಜೆಪಿಯವರು ಯೋಚಿಸಲಿ. ಬಿಜೆಪಿಯವರಿಗೆ ಪರವಾದ ತೀರ್ಪು ಬಂದಾಗ ತನಿಖಾ ಸಂಸ್ಥೆ ಸರಿ ಇರುತ್ತದೆ. ವಿರುದ್ಧವಾದ ತೀರ್ಪು ಬಂದಾಗ ಸರಿ ಇರುವುದಿಲ್ಲ. ಇದೆಂತ ರಾಜಕೀಯ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್‌ ಸರ್ಕಾರದ ಬಿ.ವೈ.ವಿಜಯೇಂದ್ರ ಆಕ್ರೋಶ!

ಮುಡಾ ಪ್ರಕರಣದಲ್ಲಿ ಆರೋಪ‌ ಮೇಲ್ನೋಟಕ್ಕೆ‌ ಕಂಡು ಬಂದ ಹಿನ್ನೆಲೆಯಲ್ಲಿ ತನಿಖೆ‌ ಮಾಡುವಂತೆ ಲೋಕಾಯುಕ್ತಕ್ಕೆ ಸೂಚಿಸಿತ್ತು.ಆ ರೀತಿ ಏನು ಇಲ್ಲ‌ ಎಂಬುದು ತನಿಖೆಯಲ್ಲಿ ಬಂದಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ. ಅದರ ಕೆಲಸ ಕಾರ್ಯಗಳಲ್ಲಿ ಸರ್ಕಾರ ಏನಾದರು ನಿರ್ದೇಶನ ನೀಡುತ್ತದೆಯೇ? ಈ ರೀತಿಯಾಗಿ ನಡೆದುಕೊಳ್ಳುವಂತೆ ಹೇಳಲು ಆಗುತ್ತದೆಯೇ? ಎಂದರು.

ಗೃಹಲಕ್ಷ್ಮೀ ಯೋಜನೆಯಲ್ಲಿನ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಾಗುವುದು. ಬಿಜೆಪಿಯವರು ಲಕ್ಷಾಂತರ ಕೋಟಿ ರೂ. ಬಿಲ್ ಬಾಕಿ ಉಳಿಸಿ ಹೋಗಿದ್ದರು. ಇದೆಲ್ಲವನ್ನು ನಮ್ಮ ಸರ್ಕಾರ ಪಾವತಿಸಿದೆ‌‌ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News