ಉಡುಪಿ ಜಿಲ್ಲೆಯಲ್ಲಿ ಎನ್‌ಕೌಂಟರ್‌: ನಕ್ಸಲ್‌ ನಾಯಕ ವಿಕ್ರಮ್‌ ಗೌಡನನ್ನು ಗುಂಡಿಕ್ಕಿ ಕೊಂದ ಪೋಲಿಸರು

Vikram gowda encounter: ಕರ್ನಾಟಕದ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆ ಅರಣ್ಯದಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಮತ್ತು ನಕ್ಸಲ್‌ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಧಾನ ನಕ್ಸಲ್‌ ನಾಯಕ ವಿಕ್ರಮ್ ಗೌಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.   

Written by - Zee Kannada News Desk | Last Updated : Nov 19, 2024, 11:01 AM IST
  • ಕರ್ನಾಟಕದ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆ ಅರಣ್ಯದಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲ್‌ಗಳ ನಡುವೆ ನಡೆದ ಗುಂಡಿನ ಚಕಮಕಿ
  • ಗುಂಡಿನ ಚಕಮಕಿಯಲ್ಲಿ ಪ್ರಧಾನ ನಕ್ಸಲ್‌ ನಾಯಕ ವಿಕ್ರಮ್ ಗೌಡ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಎನ್‌ಕೌಂಟರ್‌: ನಕ್ಸಲ್‌ ನಾಯಕ ವಿಕ್ರಮ್‌ ಗೌಡನನ್ನು ಗುಂಡಿಕ್ಕಿ ಕೊಂದ ಪೋಲಿಸರು title=

Vikram gowda encounter: ಕರ್ನಾಟಕದ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆ ಅರಣ್ಯದಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಮತ್ತು ನಕ್ಸಲ್‌ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಧಾನ ನಕ್ಸಲ್‌ ನಾಯಕ ವಿಕ್ರಮ್ ಗೌಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ದಿನಬಳಕೆಯ ವಸ್ತುಗಳನ್ನು ಖರೀದಿಸಲು ಗ್ರಾಮವೊಂದರಲ್ಲಿ ಐದು ಸದಸ್ಯರ ನಕ್ಸಲ್‌ ಗುಂಪು ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ವಿಷಯ ತಿಳಿಯುತ್ತಿದ್ದಂತೆ ಪೋಲಿಸರು ನಕ್ಸಲ್‌ಗಳನ್ನು ಹುಡುಕುವ  ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಯಾಚರನೆಯ ವೇಳೆಯಲ್ಲಿ ನಕ್ಷಲರ ಗುಂಪು  ಪೊಲೀಸರ ಮೇಲೆ ದಾಳಿ ನಡೆಸಿದರು, ಇದು ಗುಂಡಿನ ಚಕಮಕಿಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಗುಂಪಿನ ನಾಯಕ ವಿಕ್ರಮ್‌ ಗೌಡ ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರರು  ತಪ್ಪಿಸಿಕೊಂಡು ಓಡಿಹೋಗಿದ್ದಾರೆ ಎಂದು ಎಚ್‌ಟಿ ವರದಿ ಮಾಡಿದೆ.

ವಿಕ್ರಮ್‌ ಗೌಡ, ಈ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದ, ಪಶ್ಚಿಮ ಘಟ್ಟಗಳಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಸಂಬಂಧ ನಡೆಸಲಾದ ಕಾರ್ಯಾಚರಣೆಯಲ್ಲಿ ವಿಕ್ರಮ್‌ ಗೌಡ ಸಿಕ್ಕಿಬಿದ್ದಿದ್ದು, ಗುಂಡಿನ ಚಕಮಕಿ ವೇಳೆ ಗುಂಡು ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. 

ಕರ್ನಾಟಕದ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ, ನಿರ್ದಿಷ್ಟವಾಗಿ ಕಡಬ, ಸುಳ್ಯ ತಾಲೂಕುಗಳು ಮತ್ತು ಚಿಕ್ಕಮಗಳೂರುಗಳಲ್ಲಿ ನಕ್ಸಲರು ನೆಲೆಯೂರಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಸಂಧರ್ಭದಲ್ಲಿ ಈ ತಂಡದ ನಾಯಕಿ ಮುಂಗಾರು ಲತಾ ಮತ್ತು ಅವರ ತಂಡದ ಮೇಲೆ ದಾಳಿ ನಡೆಸಲಾಗಿದ್ದು,  ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News