ಬೆಂಗಳೂರು: 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಅಧಿಕಾರಾವಧಿಯಲ್ಲಿ LOCಗಾಗಿ ಯಾರಾದರೂ ನನಗೆ ಐದು ಪೈಸೆ ಲಂಚ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಸಂದರ್ಭದಲ್ಲಿ ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ- ಉಗ್ರರ ಬಗ್ಗೆ ಕಾಂಗ್ರೆಸ್ನ ಸಹಾನುಭೂತಿ ಮನೋಭಾವ ಆತಂಕಕಾರಿ : ಅಶೋಕ್ ಆಕ್ರೋಶ
ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.
ಇದನ್ನೂ ಓದಿ- ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆ ಚಿಂತಿಸಲಾಗುವುದು : ಮುಖ್ಯ ಮಂತ್ರಿ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.