ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9235 ಪುಟಗಳ ಆರೋಪಪಟ್ಟಿಯನ್ನು ಎಸ್ಐಟಿ ಪೊಲೀಸರು ಕೋಕಾ (Karnataka Control of Crimes Act) ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಈ ಪ್ರಕರಣದಲ್ಲಿ 18 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, 16 ಬಂಧಿತರು ಮತ್ತು ಇಬ್ಬರು ಆರೋಪಿಗಳು ನಾಪತ್ತೆಯಾಗಿರುವುದಾಗಿ ಎಸ್ಐಟಿ ಪೊಲೀಸರು ಉಲ್ಲೇಖಿಸಿದ್ದಾರೆ. ಸುಮಾರು 450ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಯನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ಅನುಮತಿ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದ್ದು, ಮತ್ತಷ್ಟು ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ ಎಂದು ವಿಶೇಷ ತನಿಖಾ ತಂಡ ಹೇಳಿದೆ.
Today SIT submitted additional chargesheet against 18 accused persons to Special Court for KCOCA (Karnataka Control of Crimes Act). It is 9235 pages. We've also sought permission to probe further. More details will be given later: Special Investigation Team on Gauri Lankesh case
— ANI (@ANI) November 23, 2018
2017ರ ಸೆಪ್ಟೆಂಬರ್ 5 ರಂದು ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ (55) ಅವರ ಮೇಲೆ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ಗೆ ಆದೇಶಿಸಿತ್ತು. ಅದರಂತೆ ಕಳೆದ ಒಂದು ವರ್ಷದಿಂದ ಎಸ್ಐಟಿ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.