ಚಾಮರಾಜನಗರ: ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ 22 ಚಾಂಪಿಯನ್ ಶಿಪ್ 2024- ಪ್ರೋನ್ ಪುರುಷ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ನಗರದ ಜೋಡಿರಸ್ತೆಯಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ರಮೇಶ್ ಬಾಬು ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಚಿನ್ನದಪದಕ ಪಡೆದಿದ್ದಾರೆ.
ಪತ್ನಿ ಸತ್ಯಭಾಮ ಕೂಡ ಮಹಿಳಾ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ದಂಪತಿಗಳು ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: Bengaluru's 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?
ರಮೇಶ್ಬಾಬು ಹಿಂದೆಯೂ ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಾಷ್ಟ್ರ, ರಾಜ್ಯದ ಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಸುಮಾರು ಒಟ್ಟು 107 ಪದಕ ಬಂದಿದ್ದು, ಅದರಲ್ಲಿ 73 ಚಿನ್ನದಪದಕ, 24 ಬೆಳ್ಳಿ ಪದಕ ಪಡೆದಿದ್ದಾರೆ.
ಪತ್ನಿ ಸತ್ಯಭಾಮ ಎರಡು ವರ್ಷಗಳಿಂದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ದ್ವಿತೀಯ ಸ್ಥಾನ ಪಡೆದು 2 ಬೆಳ್ಳಿ ಪದಕ ಪಡೆದಿದ್ದಾರೆ. ಇಬ್ಬರು ಕೂಡ ರೈಫಲ್ ಅಭ್ಯಾಸದಲ್ಲಿ ನಿರಂತರವಾಗಿ ತೊಡಗಿದ್ದು, ಅಂತರರಾಷ್ಟ್ರೀಯ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡುವ ಗುರಿಯಿಟ್ಟುಕೊಂಡಿದ್ದಾರೆ.
ಇದನ್ನೂ ಓದಿ: Hyundai Creta: ಭರ್ಜರಿ ಸೇಲ್ ಆಗುತ್ತಿರುವ ಹೊಸ ಹುಂಡೈ ಕ್ರೆಟಾದ ವೈಶಿಷ್ಟ್ಯಗಳ ಬಗ್ಗೆ ತಿಳಿಯಿರಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.