'ಸುಳ್ಳು ಸುದ್ದಿ ಹಾಗೂ ಸಮೂಹ ಸನ್ನಿಯಿಂದ ದೂರವಿರಿ'

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.  2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ.

Written by - Manjunath N | Last Updated : Jan 5, 2025, 11:45 PM IST
  • ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • 2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ.
  • ಕ್ರೀಡಾ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೋಳ, ಟೆನ್ನಿಸ್, ಬಾಸ್ಕೆಟ್‍ಬಾಲ್ ಕ್ರೀಡಾಂಗಣಗಳನ್ನು ನಿರ್ಮಿಸಿದ್ದೆ.
'ಸುಳ್ಳು ಸುದ್ದಿ ಹಾಗೂ ಸಮೂಹ ಸನ್ನಿಯಿಂದ ದೂರವಿರಿ' title=

ದಾವಣಗೇರಿ: ದೇಶದ ಜನಸಂಖ್ಯೆಯಲ್ಲಿ ಶೇ.35 ರಷ್ಟು ಯುವಜನರಿದ್ದಾರೆ. ಕೆಲ ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣ ಮೂಲಕ ದೇಶದ ಯುವ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ಒರೆಗೆ ಹಚ್ಚಿ, ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ದ್ವೇಷವನ್ನು ಬಿತ್ತುವ ವಿಚಾರ ಹಾಗೂ ಸಮೂಹ ಸನ್ನಿಯಿಂದ ದೂರವಿರಬೇಕು. ದೇಶದ ಬಹುತ್ವ ಅರ್ಥೈಸಿಕೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಯುವಕರಿಗೆ ಸಲಹೆ ನೀಡಿದರು.

ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.  2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ. ಕ್ರೀಡಾ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೋಳ, ಟೆನ್ನಿಸ್, ಬಾಸ್ಕೆಟ್‍ಬಾಲ್ ಕ್ರೀಡಾಂಗಣಗಳನ್ನು ನಿರ್ಮಿಸಿದ್ದೆ. ಸದ್ಯ ರಾಜ್ಯ ಸರ್ಕಾರದಿಂದ ಸಂಸದ ನೆರವಿನಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಜೆ.ಹೆಚ್.ಪಾಟೀಲ್ ನಗರದಲ್ಲಿ ಕ್ರಿಕೇಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿವೆ. ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 5802 ಯುವಜನರಿಗೆ ರೂ.8.5 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ. ದಾವಣಗೆರೆ ನಗರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಕಸಾಪ ಸದಸ್ಯರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. 

ಗಡಿಜಿಲ್ಲೆಯಲ್ಲಿ 20 ಸರ್ಕಾರಿ ಶಾಲೆಗಳು ಬಂದ್! ಕಾರಣ ಏನು ಗೊತ್ತೇ?

ಸಂಸದೆ ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಯೋಜನೆಗಳು ಜನತೆಯ ಮನಮುಟ್ಟಿವೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಯುವ ಜನತೆಗೆ ನೀಡಿ, ಯುವ ಜನಾಂಗಕ್ಕೆ ಸರ್ಕಾರ ಪ್ರಾಮುಖ್ಯತೆ ನೀಡಿದೆ.ಯುವಕರ ದೇಶದ ಆಸ್ತಿ. ಅವರ ಪ್ರತಿಭೆ ಗುರುತಿಸಿ ಅದಕ್ಕೆ ಪೂರಕವಾದ ವಾತಾವರಣ ಸೃಷ್ಠಿಸುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಮ್ಮ ಸಂವಿಧಾನದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಿಯಾಯೋಜನೆ ರೂಪಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಸವರಾಜು ವಿ ಶಿವಗಂಗಾ, ಬಿ.ದೇವೇಂದ್ರಪ್ಪ, ಬಿ.ಪಿ.ಹರೀಶ್, ಶಾಂತನಗೌಡ.ಡಿ.ಜಿ. ವಿಧಾನ ಪರಿಷತ್ ಸದಸ್ಯರಾದ  ಕೆ.ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್.ಕೆ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ್ ನಾಯ್ಕ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ರಂದೀಪ್.ಡಿ, ಪೋಲಿಸ್ ಉಪ ಮಹಾನಿರೀಕ್ಷಕ ರಮೇಶ್.ಬಿ, ಜಿಲ್ಲಾ ಪಂಚಾಯಿತಿ ಸಿಇಓ ಸುರೇಶ್ ಇಟ್ನಾಳ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಾಜಿ ಸಚಿವ ಹೆಚ್.ಆಂಜನೇಯ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಸ್ವಾಗತಿಸಿದರು. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ವಂದಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News