ಬೆಂಗಳೂರು: ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್‌ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ನಾವು ಮಾಡಿರುವ ಆರೋಪಕ್ಕೆ ಉತ್ತರ ನೀಡಿರುವ ಸಚಿವ ಅಶ್ವಥ್ ನಾರಾಯಣ್‌ರವರು 5.27 ಕೋಟಿ ರೂ. ಉಳಿಸಿದ್ದೇವೆ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.ನಿಜಾಂಶ ಏನೆಂದರೆ, ಏಕೈಕ ಬಿಡ್ಡರ್ ಇದ್ದಿದ್ದರಿಂದ ಮರು ಟೆಂಡರ್ ಮಾಡಿ, ಮೊದಲನೇ ಬಾರಿಯ ಪ್ರಕ್ರಿಯೆಯಲ್ಲಿ ಸೋತ ಕಂಪನಿಗೇ ಟೆಂಡರ್ ನೀಡಲಾಗಿದೆ. ಇದು ಕಮಿಷನ್ ಪಡೆಯಲು ಮಾಡಿದ ಕೆಲಸವೇ ಹೊರತು ಹಣ ಉಳಿಸಲು ಅಲ್ಲ. ಟೆಂಡರ್ ಗಿಟ್ಟಿಸಿಕೊಳ್ಳಲು ನಕಲಿ ಕಾಗದ ಪತ್ರಗಳ ಬಗ್ಗೆ ತುಟಿ ಬಿಚ್ಚದ ಸಚಿವರು, ಹಣ ಉಳಿಸಿದ್ದೇನೆ ಎಂದಷ್ಟೇ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.
“ನಿಯಮಾವಳಿ ಪ್ರಕಾರ ಬೇಡಿಕೆಯ 30% ಸಾಮಾಗ್ರಿಗಳನ್ನು ಪೂರೈಸುವ ಶಕ್ತಿ ಹೊಂದಿರುವ ಬಗ್ಗೆ ದಾಖಲೆ ಸಲ್ಲಿಸಬೇಕು. ಆದರೆ, ನಕಲಿ ದಾಖಲೆ ಸೃಷ್ಟಿಸಿರುವುದು GST PORTAL ನಲ್ಲೇ ಬಯಲಾಗಿದೆ. ಸಚಿವರು, ಕಾರ್ಯದರ್ಶಿಗಳು ಇದನ್ನು ಏಕೆ ಪ್ರಶ್ನಿಸಲಿಲ್ಲ ಎಂದರು.
ನಕಲಿ ದಾಖಲೆಗಳನ್ನು ಒಪ್ಪಿಸಿ ತೆರಿಗೆದಾರರ ಹಣವನ್ನು ಲೂಟಿ ಮಾಡೋಕೆ ನಾಚಿಕೆ ಆಗಬೇಕು!!
Fake documents and looting taxpayer's money. Shame on Ashwathnarayan!!@drashwathcn @BJP4Karnataka @aapkaprithvi @MohanDasari_ @jagdishsadam pic.twitter.com/8H2m8sBHQG
— AAP Bengaluru (@AAPBangalore) July 14, 2022
ಇದೇ ಕಂಪನಿ ಕೆಲ ತಿಂಗಳ ಹಿಂದೆ ಲ್ಯಾಪ್‌ಟಾಪ್ ಹಗರಣದಲ್ಲಿ ಭಾಗಿಯಾಗಿತ್ತು. ಹಿಂದೆ ರೂ 14,000 ಸಿಗುತ್ತಿದ್ದ ಲ್ಯಾಪ್‌ಟಾಪ್ ಅನ್ನು ರೂ 24000ಕ್ಕೆ ಕೊಂಡ ಸರ್ಕಾರ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿದೆ. ಉಭಯ ಸದನಗಳಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾದರೂ ಯಾವುದೇ ನಿರ್ಣಯಕ್ಕೆ ಬಂದಿಲ್ಲ. ಅಶ್ವಥ್ ನಾರಾಯಣ್ ರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾಗೊಳಿಸಿ ಸಿ.ಬಿ.ಐ ಅಥವಾ ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ ಎಂದರು.
ಸರ್ಕಾರ ಒಂದು ವಾರದೊಳಗೆ ತೀರ್ಮಾನಿದೇ ಹೋದರೆ, ಈ ಹಗರಣದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಿ ಜನಪರ ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.