ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ ಎಂದರು.
ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ಯಾವ ಸಮಸ್ಯೆಗಳೂ ಪಕ್ಷದಲ್ಲಿ ಇಲ್ಲ. ಇವೆಲ್ಲವೂಗಳ ಬಗ್ಗೆಯೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಪರಮೇಶ್ವರ್, ರಾಜಣ್ಣ ಕಾರಣಾಂತರಗಳಿಂದ ಸಭಗೆ ಬಂದಿರಲಿಲ್ಲವಷ್ಟೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ.ಶಿವಕುಮಾರ್ ಮತ್ತು ಸತೀಶ್ ಜಾರಕಿಜೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ. ಎಲ್ಲರೂ ಕೂಡಿಯೇ ಪಕ್ಷದ ಕಚೇರಿ ನಿರ್ಮಿಸಿದ್ದಾರೆ ಎಂದೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಾತಿಗಣತಿ ವರದಿಯನ್ನು ನಾನು ಯಾವತ್ತೂ ವಿರೋಧಿಸಿಲ್ಲ. ಆದರೆ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಹೇಳುತ್ತ ಬಂದಿದ್ದೇನೆ. ಏಕೆಂದರೆ, ಲಿಂಗಾಯತರಲ್ಲೇ ಬೇರೆಬೇರೆ ಉಪಪಂಗಡಗಳು ಬೇರೆಬೇರೆ ರೀತಿ ನಮೂದಿಸಿದೆ. ಇಷ್ಟಕ್ಕೂ ವರದಿಯಲ್ಲೇನಿದೆ ಎಂದು ಯಾರೂ ನೋಡಿಲ್ಲ. ಆದರೆ, ವೀರಶೈವ ಮಹಾಸಭಾದವರು ವರದಿಯನ್ನು ವಿರೋಧಿಸುತ್ತಿದ್ದರೆ ಅಂತಹ ಹಕ್ಕು ಅದಕ್ಕಿದೆ. ಸುರ್ಜೇವಾಲಾ ಕೂಡ ಯಾವೊಂದು ಸಮುದಾಯಕ್ಕೂ ನೋವಾಗದಂತೆ ನಾವು ನಡೆದುಕೊಳ್ಳಬೇಕು ಎಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹತ್ತಿರವಾಯಿತು ಮಹಾ ಪ್ರಳಯದ ದಿನ !ಭೂಪಟದಿಂದಲೇ ಮಾಯವಾಗಲಿದೆ ಈ ದೇಶ !ಮನೆ ಮಠ ಖಾಲಿ ಮಾಡಿ ತೆರಳುವಂತೆ ದೇಶವಾಸಿಗಳಿಗೆ ಸೂಚನೆ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದು ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಗುತ್ತಿಗೆದಾರರ 30 ಸಾವಿರ ಕೋಟಿ ರೂ. ಬಿಲ್ ಪಾವತಿ ನನೆಗುದಿಗೆ ಬೀಳಲು ಹಿಂದಿನ ಬಿಜೆಪಿ ಸರಕಾರವೇ ಕಾರಣ. ಅವರು ಯಾವ ಅನುಮತಿಯೂ ಇಲ್ಲದೆ 2 ಲಕ್ಷ ಕೋಟಿ ರೂ. ಮೊತ್ತದ ಗುತ್ತಿಗೆ ಕಾಮಗಾರಿ ಶುರು ಮಾಡಿದ್ದರು. ಹೀಗಾಗಿ 35 ಸಾವಿರ ಕೋಟಿ ರೂ. ಪಾವತಿಯೇ ಆಗಿರಲಿಲ್ಲ. ಆ ಹೊರೆ ನಮ್ಮ ಸರಕಾರದ ಮೇಲೆ ಬಿತ್ತು ಎಂದು ಅವರು ವಿವರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.