'ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ'-ಸಿಎಂ ಸಿದ್ದರಾಮಯ್ಯ

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು.ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

Written by - Manjunath N | Last Updated : Feb 17, 2025, 06:54 PM IST
  • ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ.
  • ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು.
  • ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
 'ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ'-ಸಿಎಂ ಸಿದ್ದರಾಮಯ್ಯ  title=
file photo

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅವರು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಉತ್ತರಿಸುತ್ತಿದ್ದರು.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಹೇಳಿದರು.

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು.ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮದುವೆ ಮಂಟಪದ ಬಾಡಿಗೆ ದುಬಾರಿನಾ? ಹಾಗಾದ್ರೆ ಇಲ್ಲಿದೆ ಕೇವಲ 2 ಸಾವಿರ ರೂ. ಮಂಟಪ..!

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ.ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು.ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ.ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ಹೇಳಿದರು.

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

.ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News