Union Budget: ಈ ಬಜೆಟ್‌ ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್ ಎಂದ ಬಸವರಾಜ ಬೊಮ್ಮಾಯಿ

ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವೆ ಮಂಡಿಸಿರುವ ಬಜೆಟ್‌ ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್ ಆಗಿದೆ. ಜೊತೆಗೆ ಪ್ರಧಾನಿ ಮೋದಿಯವರ ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. 

Written by - Zee Kannada News Desk | Last Updated : Feb 1, 2025, 10:38 PM IST
  • ಕೇಂದ್ರ ಹಣಕಾಸು ಸಚಿವೆ ಮಂಡಿಸಿರುವ ಬಜೆಟ್‌ ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್ ಆಗಿದೆ.
  • ನವ ತಂತಜ್ಞಾನಕ್ಕೆ ಬಹಳಷ್ಟು ಒತ್ತು ಕೊಟ್ಟಿರುವ ಬಜೆಟ್ ಇದಾಗಿದೆ
  • ಆತ್ಮನಿರ್ಭರ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಪೂರಕವಾದ ಬಜೆಟ್ ಆಗಿದೆ .
Union Budget: ಈ ಬಜೆಟ್‌ ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್ ಎಂದ ಬಸವರಾಜ ಬೊಮ್ಮಾಯಿ title=

ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವೆ ಮಂಡಿಸಿರುವ ಬಜೆಟ್‌ ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್ ಆಗಿದೆ. ಜೊತೆಗೆ ಪ್ರಧಾನಿ ಮೋದಿಯವರ ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. 

ಬಜೆಟ್‌ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಈ ಬಾರಿಯ ಬಜೆಟ್‌ ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಆಗಿದೆ. ಇದು ದೂರದೃಷ್ಟಿಯ ವಿಕಸಿತ ಭಾರತ 2047ರ ಅಡಿಗೆ ತೆಗೆದುಕೊಂಡು ಹೋಗುವ ಅಭಿವೃದ್ಧಿ ಪರವಾಗಿರುವ ಬಜೆಟ್ ಆಗಿದೆ ಎಂದಿದ್ದಾರೆ. 

ತೆರಿಗೆ ವಿನಾಯಿತಿ:
ಆತ್ಮನಿರ್ಭರ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಪೂರಕವಾದ ಬಜೆಟ್ ಆಗಿದೆ . ಈ ಮೂಲಕ ಮಧ್ಯಮ ವರ್ಗದ ಜನರ ನಿರೀಕ್ಷೆಗಳಿಗೆ ಬೂಸ್ಟ್ ನೀಡಿದೆ. ಈ ಬಾರಿ ಎಲ್ಲರೂ 10 ಲಕ್ಷ ರೂ ತೆರಿಗೆ ವಿನಾಯಿತಿ ನಿರೀಕ್ಷೆ ಮಾಡಿದ್ದರು. ಆದರೆ 12 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಿ ಬಂಪರ್‌ ನೀಡಿದೆ. 

ಕೃಷಿ ವಲಯ:
ಬಡವರು. ರೈತರು, ಮಹಿಳೆಯರು, ಯುವಕರು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಳ್ಳಲು ಆದ್ಯತೆ ನೀಡಲಾಗಿದೆ.  ತನ್ನದೇ ತಾಂತ್ರಿಕತೆಗೆ ಸಂಶೋಧನೆಗೆ ವಿಶೇಷವಾಗಿ ಕೃಷಿಯನ್ನು ಆತ್ಮ ನಿರ್ಭರ ಮಾಡುವ ಬಜೆಟ್ ಇದಾಗಿದ್ದು, ಯೂರಿಯಾ ಗೊಬ್ಬರ, ಬೀಜ, ಉತ್ಪಾದನೆಯಲ್ಲಿ ನಾವು ಸಂಪೂರ್ಣವಾಗಿ ಆತ್ಮನಿರ್ಭರವಾಗಲು ಅವಕಾಶ ನೀಡಲಾಗಿದೆ. ಸ್ವಯಂ ಉದ್ಯೋಗವಕಾಶ, ರೈಲ್ವೆ, ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುತ್ತಿದೆ. ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂ. 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲ ಘೋಷಿಸಲಾಗಿದ್ದು, ಇದರಿಂದ ಕರ್ನಾಟಕಕ್ಕೂ 7ರಿಂದ 8 ಸಾವಿರ ಕೋಟಿ ರೂ. ಸಾಲ ದೊರೆಯುವ ಸಾಧ್ಯತೆ ಇದೆ. ವಿಶೇಷವಾಗಿರುವ ಕ್ಯಾನ್ಸರ್, ಎಲೆಕ್ಟ್ರಾನಿಸ್ಕ್‌ ಮೆಡಿಕಲ್ ಸೈನ್ಸನ್, ನವ ತಂತಜ್ಞಾನಕ್ಕೆ ಬಹಳಷ್ಟು ಒತ್ತು ಕೊಟ್ಟಿರುವ ಬಜೆಟ್ ಇದಾಗಿದೆ ಎಂದು ಹೇಳಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News