ಮುಡಾಕ್ಕಿಂತಲೂ ದೊಡ್ಡ ಹಗರಣ; ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಫೋಟಕ ಬಾಂಬ್‌ ಸಿಡಿಸಿದ ಎಚ್‌.ಡಿ.ಕುಮಾರಸ್ವಾಮಿ!

MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Written by - Puttaraj K Alur | Last Updated : Oct 1, 2024, 08:37 PM IST
  • ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಅತಿದೊಡ್ಡ ಸಂಕಷ್ಟ!
  • ಮುಡಾ ಹಗರಣ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ
  • ಸಿಎಂ ಸಿದ್ದರಾಮಯ್ಯರ ವಿರುದ್ಧ ಮತ್ತೊಂದು ಸ್ಫೋಟಕ ಬಾಂಬ್‌ ಸಿಡಿಸಿದ ಎಚ್‌ಡಿಕೆ
ಮುಡಾಕ್ಕಿಂತಲೂ ದೊಡ್ಡ ಹಗರಣ; ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಫೋಟಕ ಬಾಂಬ್‌ ಸಿಡಿಸಿದ ಎಚ್‌.ಡಿ.ಕುಮಾರಸ್ವಾಮಿ! title=
ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ!

HD Kumaraswamy V/s Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಅತಿದೊಡ್ಡ ಸಂಕಷ್ಟ ಎದುರಾಗಿದೆ. ರಾಜಕೀಯದ ಆರೋಪ-ಪ್ರತ್ಯಾರೋಪಗಳ ನಡುವೆ ಸಿದ್ದರಾಮಯ್ಯರ ಪತ್ನಿ ಪಾರ್ವತಮ್ಮನವರು ಮುಡಾದಿಂದ ಪಡೆದುಕೊಂಡಿದ್ದ 14 ಸೈಟ್‌ಗಳನ್ನು ವಾಪಸ್ ಮಾಡಿದ್ದಾರೆ. ಸಿಎಂ ಪತ್ನಿ ಪತ್ರ ಬರೆದ 24 ಗಂಟೆಗಳೊಳಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಡಾ ಸೈಟ್‌ಗಳನ್ನು ವಾಪಸ್ ಪಡೆದುಕೊಂಡಿದೆ. ದೆಹಲಿಯಲ್ಲಿ ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯರ ವಿರುದ್ಧ ಮತ್ತೊಂದು ಸ್ಫೋಟಕ ಬಾಂಬ್‌ ಸಿಡಿಸಿದ್ದಾರೆ. 

ಮುಡಾ ಹಗರಣ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯನವರು ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಮುಡಾಕ್ಕಿಂತಲೂ ಇದು ದೊಡ್ಡ ಹಗರಣ. ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲವೆಂದು ಅವರ ಶ್ರೀಮತಿ ಹೇಳುತ್ತಾರೆ. ಈ ಹಿಂದೆ ಅವರು ಏನೆಲ್ಲಾ ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ. ವೈಟ್ನರ್ ಹಾಕಿ ಎಲ್ಲಾ ಮುಗಿದೊಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ ಅಂತಾ ಟೀಕಿಸಿದರು.  

ಇದನ್ನೂ ಓದಿ: ಮುಡಾ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ

ಸಿದ್ದರಾಮಯ್ಯರ ವಿರುದ್ಧ ಮತ್ತೊಂದು ಹಳೆ ಸೈಟ್ ಅಕ್ರಮದ ಬಗ್ಗೆ ಮಾಹಿತಿ ನೀಡಿದ ಎಚ್‌ಡಿಕೆ, 14 ಸೈಟ್‌ಗಳ ಕಥೆ ಒಂದಾದರೆ, ಇದು ಅದಕ್ಕಿಂತ ಹಳೆಯ ಪ್ರಕರಣ. ಆ ಪ್ರಕರಣ ಕುತ್ತಿಗೆಗೆ ಬಂದಾಗ 1 ಕೋಟಿ ರೂ.ಗೆ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಅದನ್ನು ಮಾರಾಟ ಮಾಡಲಾಯಿತು ಅಂತಾ ಕಥೆ ಕಟ್ಟಿದ್ದರು. ಹಾಗಾದ್ರೆ ಆ ನಿವೇಶನ ಎಲ್ಲಿಂದ ಬಂದಿತ್ತು? ಸ್ವಲ್ಪ ಹೇಳುವಿರಾ ಅಂತಾ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಿಂದ ಸಿದ್ದರಾಮಯ್ಯರ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿ ರಿಲೀಫ್ ಪಡೆದುಕೊಂಡರು. ಇದು 14 ಸೈಟ್‌ಗಳಿಗಿಂತಲೂ ದೊಡ್ಡ ಹಗರಣ. ಊರಿಗೆ ಬುದ್ದಿ ಹೇಳುವವರು ಇಲ್ಲಿ ಏನೇನು ಮಾಡಿದ್ದಿರಿ? ಅಂತಾ ಸತ್ಯವನ್ನು ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ಸಿದ್ದರಾಮಯ್ಯನವರು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆ ಅವರ ವಿರುದ್ಧ ಇನ್ನು ಎರಡು ಪ್ರಕರಣಗಳಿವೆ ಅಂತಾ ಎಚ್‌ಡಿಕೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ-ಶಾಸಕ ಅಭಯ ಪಾಟೀಲ ಮಧ್ಯೆ ಬಿಗ್‌ ಫೈಟ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News