ದೆಹಲಿ ಚುನಾವಣೆಯಿಂದಾರೂ ಕಾಂಗ್ರೆಸ್ ಪಾಠ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ 

ಕಾಂಗ್ರೆಸ್, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ಹೊರಹೊಮ್ಮಬೇಕು. ಆಡಳಿತ ಪಕ್ಷದೊಂದಿಗೆ ಒಂದು ಪಕ್ವ ವಿಪಕ್ಷವಾಗಿ ಇರಬೇಕು. ಮುಂದಿನ ದಿನಗಳಲ್ಲಿ ಆದರೂ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಹೆಜ್ಜೆಯಿಡಲಿ ಎಂದು ಸಚಿವ ಜೋಶಿ ಸಲಹೆ ಮಾಡಿದರು.

Written by - Krishna N K | Last Updated : Feb 10, 2025, 12:35 PM IST
    • ಕಾಂಗ್ರೆಸ್ ದೆಹಲಿ ಚುನಾವಣೆಯಿಂದ ಆದರೂ ಪಾಠ ಕಲಿಯಬೇಕು.
    • ದನದಲ್ಲಿ ಅನಗತ್ಯ ಗದ್ದಲ ಎಬ್ಬಿಸಿ ಸ್ಥಗಿತಗೊಳಿಸುವುದನ್ನು ನಿಲ್ಲಿಸಲಿ
    • ಕಾಂಗ್ರೆಸ್‌ ಪಕ್ಷಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ
ದೆಹಲಿ ಚುನಾವಣೆಯಿಂದಾರೂ ಕಾಂಗ್ರೆಸ್ ಪಾಠ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ  title=

ನವದೆಹಲಿ: ಕಾಂಗ್ರೆಸ್ ದೆಹಲಿ ಚುನಾವಣೆಯಿಂದ ಆದರೂ ಪಾಠ ಕಲಿಯಬೇಕು. ಸದನದಲ್ಲಿ ಅನಗತ್ಯ ಗದ್ದಲ ಎಬ್ಬಿಸಿ ಸ್ಥಗಿತಗೊಳಿಸುವುದನ್ನು ನಿಲ್ಲಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸಂಸತ್ ಆವರಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಸದನದಲ್ಲಿ ಒಂದು ಪಕ್ವ ವಿಪಕ್ಷವಾಗಿ ವರ್ತಿಸಲಿ ಎಂದು ಸಲಹೆ ನೀಡಿದರು. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವಾಗಿ ಶೂನ್ಯ ಸಂಪಾದನೆ ಸಾಧಿಸಿದೆ. ಇದು ಅವರ ಹಿಂಸಾಚಾರ ಪ್ರಚೋದನೆಗೆ ಸಿಕ್ಕ ಪ್ರತ್ಯುತ್ತರ ಎಂದು ಜೋಶಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:15ನೇ ಏರ್‌ ಶೋ ಹಿನ್ನೆಲೆ ಸಂಚಾರ ದಟ್ಟಣೆ : ಏರ್ಪೊರ್ಟ್ ಕಡೆಗೆ ಹೋಗುವ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಸೂಚಿ

ದೆಹಲಿಯಲ್ಲಿ ಹ್ಯಾಟ್ರಿಕ್ ಆಡಳಿತ ನಡೆಸಿದಂತಹ ಕಾಂಗ್ರೆಸ್ ಪಕ್ಷ ಈಗ ಹ್ಯಾಟ್ರಿಕ್ ಆಗಿಯೇ ಶೂನ್ಯ ಸಂಪಾದನೆ ಮಾಡಿದೆ. ಶೇ.45-50ರಷ್ಟು ಮತ ಪಡೆಯುತ್ತಿದ್ದವರು ಈಗ ಇಂಥ ಹೀನಾಯ ಸ್ಥಿತಿ ತಲುಪಿದ್ದಾರೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ಹೊರಹೊಮ್ಮಬೇಕು. ಆಡಳಿತ ಪಕ್ಷದೊಂದಿಗೆ ಒಂದು ಪಕ್ವ ವಿಪಕ್ಷವಾಗಿ ಇರಬೇಕು. ಮುಂದಿನ ದಿನಗಳಲ್ಲಿ ಆದರೂ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಹೆಜ್ಜೆಯಿಡಲಿ ಎಂದು ಸಚಿವ ಜೋಶಿ ಸಲಹೆ ಮಾಡಿದರು.

ಇದನ್ನೂ ಓದಿ:ಧಾರವಾಡದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡವೇರಿದ್ದ ಆರೋಪಿ ಕೊನೆಗೂ ಸೆರೆ

ಹಿಂಸಾಚಾರ ಪ್ರಚೋದನೆ, ಸದನದಲ್ಲಿ ಅನಗತ್ಯ ಗದ್ದಲ, ಸುಗಮವಾಗಿ ಸದನ ನಡೆಯಲು ಬಿಡದೇ ಇರುವುದು ಇದೆಲ್ಲವನ್ನೂ ಮತದಾರರು ಗಮನಿಸಿದ್ದಾರೆ. ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ಈಗ ಜನರೇ ಕೊಟ್ಟಿದ್ದಾರೆ ಎಂದು ಹೇಳಿದರು.

ಸದನ ಸ್ಥಗಿತಗೊಳಿಸುವುದನ್ನು ನಿಲ್ಲಿಸಲಿ: ಸಂಸತ್ ಅಲ್ಲಿ ಸಣ್ಣಪುಟ್ಟ ವಿಷಯಗಳಿಗೆ ಗದ್ದಲ ಎಬ್ಬಿಸಿ ಸದನ ಸ್ಥಗಿತಗೊಳಿಸುವುದನ್ನು ಕಾಂಗ್ರೆಸ್ ಇನ್ನಾದರೂ ನಿಲ್ಲಿಸಲಿ. ಬದಲಿಗೆ ಒಂದು ರಚನಾತ್ಮಕ ವಿಪಕ್ಷವಾಗಿ ಚರ್ಚೆ ನಡೆಸುವತ್ತ ಗಮನ ಹರಿಸಲಿ ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News