ಬೆಂಗಳೂರು: ಮೈಸೂರಿನಲ್ಲಿ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರು ಇಡಲು ಅಲ್ಲಿನ ಪಾಲಿಕೆ ಮುಂದಾಗಿರುವ ಬೆನ್ನಲ್ಲೇ ಇದೆ ಮೊದಲ ಬಾರಿಗೆ ಈ ವಿಚಾರವಾಗಿ ಸಿಎಂ ಮೌನ ಮುರಿದಿದ್ದಾರೆ.
ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 'ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ : ಡಿಸಿಎಂ ಡಿ.ಕೆ. ಶಿವಕುಮಾರ್
ಈ ವಿಚಾರವಾಗಿ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸಿತ್ತು,ಅಷ್ಟೇ ಅಲ್ಲದೆ ಅವರ ಮೌನ ನಡೆಯನ್ನು ಪ್ರಶ್ನಿಸಿತ್ತು.ಈ ಆರೋಪದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಬಂದಿದೆ.
ಇನ್ನೂ ಇತ್ತೀಚಗೆ ಶರಣಾದ ನಕ್ಸಲರ ಶಸ್ತ್ರಾಸ್ತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು 'ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂದು ಗೊತ್ತಿದೆ. ಅದನ್ನು ಪೊಲೀಸರು ಮಹಜರಿಗೆ ಒಳಪಡಿಸಿ ವಶಕ್ಕೆ ತೆಗೆದುಕೊಳ್ತಾರೆ.ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಕರ್ತವ್ಯವನ್ನು ನಾವು ಚಾಚೂತಪ್ಪದೆ ಪಾಲನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.