ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು?

Lakshmi Hebbalkar statement on cabinet reshuffle: ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, "ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡ್‌ಗೆ ಬಿಟ್ಟಿದ್ದು, ಈ ವಿಷಯ ಚರ್ಚೆ ಮಾಡುವಂತದ್ದಲ್ಲ" ಎಂದು ತಿಳಿಸಿದರು.

Written by - Prashobh Devanahalli | Edited by - Bhavishya Shetty | Last Updated : Jan 13, 2025, 06:28 PM IST
    • ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು
    • ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ
    • ಅಧಿಕಾರ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದೇನು? title=
Lakshmi Hebbalkar

ಬೆಂಗಳೂರು: ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, "ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ" ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್‌ ಬಾಸ್‌ ಶಾಕಿಂಗ್‌ ಎಲಿಮಿನೇಷನ್‌... ಫಿನಾಲೆಗೆ ಹೋಗ್ತಾರೆ ಅನ್ಕೊಂಡಿದ್ದ ಸ್ಪರ್ಧಿಯೇ ಔಟ್‌! ಅತಿಯಾದ ಮೌನವೇ ಎಲಿಮಿನೇಷನ್‌ಗೆ ಕಾರಣವಾಯ್ತಾ?

ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಧಿವೇಶನದ 100 ವರ್ಷಾಚರಣೆಯ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಂಪುಟ ಪುನಾರಚನೆ ಕಪೋಲಕಲ್ಪಿತ:
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, "ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡ್‌ಗೆ ಬಿಟ್ಟಿದ್ದು, ಈ ವಿಷಯ ಚರ್ಚೆ ಮಾಡುವಂತದ್ದಲ್ಲ" ಎಂದು ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ತಿಳಿಸಿದರು.

ಇದನ್ನೂ ಓದಿ: ಹಳೆಯ ಬಟ್ಟೆಗಳನ್ನು ದಾನ ಮಾಡುವುದು ಒಳ್ಳೆಯದೆ..? ಈ ತಪ್ಪನ್ನು ಮಾಡುವ ಮುನ್ನ ಇದನ್ನ ತಿಳಿದುಕೊಳ್ಳಿ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ‌. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News