ಟಿ20 ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಐವರಿ ಕೋಸ್ಟ್ ತಂಡವು ಕೇವಲ 7 ರನ್ಗೆ ಆಲೌಟ್ ಆಗಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಡಿಮೆ ಸ್ಕೋರ್ ಎಂಬುದು ವಿಶೇಷ. ಲಾಗೋಸ್ನನಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ನೈಜಿರೀಯಾ ಹಾಗೂ ಐವರಿ ಕೋಸ್ಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ನೈಜೀರಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ನೈಜಿರೀಯಾ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 271 ರನ್ ಕಲೆಹಾಕಿತು.
ಡಾ. ಎಪಿಜೆ ಅಬ್ದುಲ್ ಕಲಾಂ. ಈ ಹೆಸರು ಕಿವಿಗೆ ಬಿದ್ದ ತಕ್ಷಣ ಮಹಾಗುರು, ಸರಳ ಸಜ್ಜನಿಕೆಯ ಸಾಕಾರಮೂರ್ತಿ, ಆದರ್ಶನೀಯ ವ್ಯಕ್ತಿತ್ವವೊಂದು ಕಣ್ಣ ಮುಂದೆ ಬರುತ್ತದೆ. ಖಂಡಿತಾ ನಿಜ. ಅಬ್ದುಲ್ ಕಲಾಂ ಎಂದರೇನೆ ಹಾಗೆ ಬದುಕಿಗೆ ಸ್ಫೂರ್ತಿಯಾದ, ಆದರ್ಶವಾದ ಗುರು ಅವರು, ಭಾರತದ ಹೆಮ್ಮೆಯ ಪುತ್ರ, ಅಪೂರ್ವ ವಿಜ್ಞಾನಿ ಇಂದಿಗೂ ಜನಮಾನಸದಲ್ಲಿ 'ಮಿಸೈಲ್ ಮ್ಯಾನ್' ಎಂದೇ ರಾರಾಜಿಸುತ್ತಿದ್ದಾರೆ. ರಾಷ್ಟ್ರಪತಿಯಾಗಿಯೂ ಅಬ್ದುಲ್ ಕಲಾಂ ಅವರು ಜನರಿಗೆ ಬಲು ಹತ್ತಿರವಾಗಿದ್ದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವರು ಹಾಗೂ ಶಾಸಕರು ಕಾರ್ಯಕರ್ತರು ಉಸ್ತುಕರಾಗಿ ಕೆಲಸ ಮಾಡಿದರಿಂದ ಮೂರು ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳಿಗೆ ಅಭೂತಪೂರ್ವ ಗೆಲುವುವಾಗಿದೆ. ಅತ್ಯಂತ ಶಿಸ್ತುಬದ್ಧವಾಗಿ ಚುನಾವಣೆಯ ನೇತೃತ್ವವನ್ನು ವಹಿಸಿದ ಸತೀಶ್ ಜಾರಕಿಹೊಳಿ ಅವರಿಗೂ ಈ ಗೆಲುವಿನ ಶ್ರೇಯಸ್ಸು ತಟ್ಟುತ್ತದೆ ಎಂದರು.
R Ashok: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.