ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಗೆದ್ದು ಕಾಂಗ್ರೆಸ್‌ಗೆ ಬೆಂಬಲ

  • Zee Media Bureau
  • May 17, 2023, 01:36 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ಬಾರಿ ಶಾಸಕರಾಗಿ ಹ್ಯಾಟ್ರಿಕ್ ಸಾಧಿಸಿದ ಶಿವಶಂಕರ್ ರೆಡ್ಡಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನ ಸೋಲಿನ ರುಚಿಯನ್ನ ತೋರಿಸಿಕೊಟ್ಟಿದ್ದಾರೆ. ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವಂತಹ ಪುಟ್ಟಸ್ವಾಮಿ ಗೌಡ 37,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ತೋರುವುದರ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

Trending News