Free Bus Effect : ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದು ಪೊಲೀಸರು ತಲೆ ಕಡೆಸಿಕೊಳ್ಳುವಂತೆ ಮಾಡಿದೆ. ಪೀಕಲಾಟವಾಗಿತ್ತು. ಹೌದು ಚಾಕೊಲೆಟ್ ತಿನ್ನಲು ಹಣ ಕೊಡಲಿಲ್ಲ ಎಂದು 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋಗಿದ್ದಾರೆ.
ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದರಿಂದ ಪೋಷಕರು ಕಕ್ಕಾಬಿಕ್ಕಿಯಾಗಿದ್ದಾರೆ. ತಂದೆ ತಾಯಿ ಮೇಲಿನ ಕೋಪಕ್ಕೆ ಹೆಣ್ಣು ಮಕ್ಕಳು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಚಾಕೊಲೆಟ್ ಕೊಳ್ಳಲು ಹಣ ಕೇಳಿದ್ದಕ್ಕೆ ತಂದೆ ರೇಗಿದ್ದರು. ಇದರಿಂದ ಕೋಪಗೊಂಡ ಇಬ್ಬರು ಪುತ್ರಿಯರು ಬಸ್ ಹತ್ತಿ ಫ್ರೀಯಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಕೋಣನಕುಂಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದಾರೆ.
ಇದನ್ನೂ ಓದಿ - ಗುಲಬರ್ಗಾ ವಿ.ವಿ.ಘಟಿಕೋತ್ಸವ: ಮೊದಲ ಬಾರಿಗೆ ಲೈವ್ ಪ್ರಸಾರಕ್ಕೆ ಅವಕಾಶ
ಈ ವಿಚಾರ ತಿಳಿಯದ ತಂದೆ ತಾಯಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯರು ನಾಪತ್ತೆಯಾದ ಎರಡು ದಿನದ ಬಳಿಕ ಅಂದ್ರೆ ಜೂನ್ 18 ರಂದು ಧರ್ಮಸ್ಥಳದಲ್ಲಿ ಪತ್ತೆ ಹಚ್ಚಿದ್ದಾರೆ. ಸದ್ಯ ಮಕ್ಕಳ ಪತ್ತೆಯಿಂದ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ. ಅದೆನೇ ಇರ್ಲಿ.. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಕೆಲವರಿಗೆ ಅನುಕೂಲವಾದರೇ ಇನ್ನೂ ಕೆಲವರಿಗೆ ಪ್ರಾಣ ಸಂಕಟ ತಂದಿಟ್ಟಿರುವುದಂತೂ ಸುಳ್ಳಲ್ಲ.
ಇದನ್ನೂ ಓದಿ - ಬಂಜರು ಭೂಮಿಯಲ್ಲಿ ವಿದೇಶಿ ಡ್ರ್ಯಾಗನ್ ಪ್ರೂಟ್ ಬೆಳೆದು ಸೈ ಎನಿಸಿಕೊಂಡ ಯುವಕ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.