ಉಡುಪಿ : ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕಾಲೇಜು ಯುವತಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಮಾಹಿತಿ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿ ಖುಷ್ಬು ಅವರು ಇಂದು ಉಡುಪಿಯ ಪ್ಯಾರ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ, ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಆಗುವುದಿಲ್ಲ ಎಂದರು.
ಇದನ್ನೂ ಓದಿ: ಧಾರಾವಾಹಿ ನಟಿಯ ಹನಿಟ್ರ್ಯಾಪ್ಗೆ 11 ಲಕ್ಷ ರೂ. ಕಳೆದುಕೊಂಡ 75 ವರ್ಷ ವೃದ್ಧ..!
ಅಲ್ಲದೆ, ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಆಗುವುದಿಲ್ಲ, ಈಗಷ್ಟೇ ತನಿಖೆ ಆರಂಭಿಸಿದ್ದೇವೆ, ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ, ಸಾಕ್ಷ್ಯ ಸಿಕ್ಕಿದೆಯಾ ಇಲ್ಲವೇ ಎಂಬುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ, ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದರು.
ಹಾಗೂ, ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯ ಬೇಕು, ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಕೋರುತ್ತೇನೆ. ಯಾವುದೇ ರೂಮರ್ಸ್ ಮತ್ತು ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ ಎಂದು ಜನರಿಗೆ ಖುಷ್ಬು ಮನವಿ ಮಾಡಿದರು.
ಇದನ್ನೂ ಓದಿ: 'ಜೈಲರ್' ಆಡಿಯೋ ರಿಲೀಸ್ ಕಾರ್ಯಕ್ರಮ : ವಿದ್ಯುತ್ ಸ್ಪರ್ಶ, 15 ಅಡಿ ಎತ್ತರದಿಂದ ಬಿದ್ದ ಯುವಕ
ಸಂಬಂಧಪಟ್ಟ ಫೋನ್ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ನಮಗೆ ನಮ್ಮ ಕೆಲಸ ಮಾಡಲು ಬಿಡಿ. ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಎನ್ಸಿಡಬ್ಲ್ಯೂ ಪರವಾಗಿ ನಾನು ಸ್ಥಳದಲ್ಲಿ ಇದ್ದೇನೆ. ನಮಗೆ ನಮ್ಮ ಕೆಲಸ ಮಾಡಲು ಬಿಡಿ ಎಂದರು.
ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ. ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ, ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ಖುಷ್ಬು ಅವರು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.