ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಚುನಾವಣೆಯ ಅಕ್ರಮಗಳು ಹೆಚ್ಚಾಗಿವೆ. ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ಪ್ರತಿದಿನ ಭರ್ಜರಿ ಬೇಟೆಯಾಡುತ್ತಿದ್ದಾರೆ. ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಬಿಸಿಲನ್ನು ಲೆಕ್ಕಿಸದೆ ಚೆಕ್ಪೋಸ್ಟ್ಗಳಲ್ಲಿ ನಿರಂತರವಾಗಿ ತಪಾಸಣೆ ನಡೆಯುತ್ತಿದೆ.
ಇದೀಗ ಮತ್ತೊಂದು ದೊಡ್ಡ ಕಾರ್ಯಾಚರಣೆ ನಡೆಸಿರುವ ವಿವಿಧ ಇಲಾಖೆಗಳ ತನಿಖಾ ತಂಡಗಳು, 6.88 ಕೋಟಿ ರೂ. ನಗದು ಸೇರಿದಂತೆ ಬರೋಬ್ಬರಿ 31.18 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: Congress Manifesto: ಒಟ್ಟು 25 ಗ್ಯಾರಂಟಿಗಳೊಂದಿಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಿದ್ದ ! ಇಲ್ಲಿ ಯಾರಿಗೆ ಯಾವ ಭಾಗ್ಯ ?
ಜಪ್ತಿ ಮಾಡಿರುವ ಪೈಕಿ 22.28 ಕೋಟಿ ರೂ. ಮೌಲ್ಯದ ಮದ್ಯ, 52.42 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು, 4.50 ಲಕ್ಷ ರೂ. ಮೌಲ್ಯದ ಚಿನ್ನ, 25.97 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ನಗದು, ಮದ್ಯ, ಮಾದಕ ವಸ್ತು, ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣ ಸಂಬಂಧ 35ಕ್ಕೂ ಹೆಚ್ಚು FIR ದಾಖಲಿಸಲಾಗಿದೆ. 56,515 ಶಸ್ತ್ರಾಸ್ತ್ರ ಠೇವಣಿ ಮಾಡಲಾಗಿದ್ದು, 828 ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ. ಒಟ್ಟು ಈ ಸಂಬಂಧ ಒಟ್ಟು 3,435 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ