ರೈತರು & ಸರ್ಕಾರಿ ಅಧಿಕಾರಿಗಳಿಗೆ ಸೂಸೈಡ್ ಗ್ಯಾರಂಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

BJP vs CONGRESS: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ. 

Written by - Puttaraj K Alur | Last Updated : May 31, 2024, 02:16 PM IST
  • ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣ
  • ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
  • ಮಂತ್ರಿಗಿರಿಗೆ ರಾಜೀನಾಮೆ ನೀಡುವಂತೆ ಪ್ರಿಯಾಂಕ್‌ ಖರ್ಗೆಗೆ ಬಿಜೆಪಿ ಆಗ್ರಹ
ರೈತರು & ಸರ್ಕಾರಿ ಅಧಿಕಾರಿಗಳಿಗೆ ಸೂಸೈಡ್ ಗ್ಯಾರಂಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ! title=
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ!

BJP vs CONGRESS: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳ ನಡೆಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಬಿಜೆಪಿ, ಗುತ್ತಿಗೆದಾರನ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದೆ.

ಮೇ 26 ರಂದು ಪಿ.ಎಸ್.ಗೌಡರ್ (50) ತಮ್ಮ ಮನೆಯಲ್ಲಿನ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಅವರು ಡೆತ್‌ನೋಟ್ ಬರೆದಿಟ್ಟಿದ್ದರು. ಇದರಲ್ಲಿ ಅವರು KRIDL ಕಾಮಗಾರಿ ನಡೆಸಿದ ಹಣ ಬಂದಿಲ್ಲವೆಂಬುದನ್ನು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದರು. ಈ ಡೆತ್‌ನೋಟ್‌ ಆಧರಿಸಿ ಅವರ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. KRIDL ಸಂಸ್ಥೆ ಸೇರಿದಂತೆ 5 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಬಂಧನ ಅಪ್ಡೇಟ್

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ʼರೈತರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದ ಸೂಸೈಡ್ ಗ್ಯಾರಂಟಿಯನ್ನು ಗುತ್ತಿಗೆದಾರರಿಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಸ್ತರಿಸಿದೆʼ ಅಂತಾ ಟೀಕಿಸಿದೆ.

ʼಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಬಾಕಿ ಬಿಲ್ ಪಾವತಿ ಮಾಡಲು ನೀವು ಸೃಷ್ಟಿಸಿರುವ ಪರ್ಸೆಂಟೇಜ್ ದಂಧೆ ಇನ್ನಷ್ಟು ಗುತ್ತಿಗೆದಾರರನ್ನು ಬಲಿ ಪಡೆಯುವುದಕ್ಕೂ ಮುನ್ನ ನಿಮ್ಮ ಮಂತ್ರಿಗಿರಿಗೆ ರಾಜೀನಾಮೆ ನೀಡಿ. ಕನಿಷ್ಠ ಒಂದಷ್ಟು ಮುಗ್ದ ಜೀವಗಳಾದರೂ ಉಳಿಯುತ್ತದೆ‌ʼ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಹೈಕೋರ್ಟ್ ವಕೀಲೆ ಚೈತ್ರಾಗೌಡ ಸಾವು ಪ್ರಕರಣ: ಸಿಸಿಬಿಗೆ ತನಿಖೆ ವರ್ಗಾವಣೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News