ಚಿಕ್ಕಮಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿರುವ ಪ್ರತಿಪಕ್ಷಗಳು, ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರೂ, ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸುತ್ತಿವೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.
ಚಿಕ್ಕಮಗಳೂರು ಪ್ರೆಸ್ಕ್ಲಬ್ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, "ಸಿಎಂ ಸಿದ್ದರಾಮಯ್ಯರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ"? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ
"ಈಗ ಅವರು ಸಿಎಂ ಸಿದ್ದರಾಮಯ್ಯರ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ. ಈ ಆರೋಪದಲ್ಲಿ ಸತ್ಯಾಂಶವೇ ಇಲ್ಲ. ವಾಲ್ಮೀಕಿ ನಿಗಮ ಹಗರಣ ಕುರಿತು ಸದನದಲ್ಲಿ ಚರ್ಚಿಸಿದ ಪ್ರತಿಪಕ್ಷದವರು ಸರ್ಕಾರ, ಮುಖ್ಯಮಂತ್ರಿಗಳ ವಿರುದ್ಧಸಲ್ಲದ ಆರೋಪಗಳನ್ನು ಮಾಡಿದರು. ಬಳಿಕ ಉತ್ತರಕ್ಕೂ ಅವಕಾಶ ನೀಡದೆ, ರಾಜಕಾರಣ ಮಾಡಿದರು. ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ಮೂಲಕ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಅಕ್ರಮ ನಡೆದಿಲ್ಲ ಎಂಬುದನ್ನು ದಾಖಲೆಗಳ ಸಹಿತ ಬಹಿರಂಗಪಡಿಸಿದ್ದಾರೆ. ಆದರೂ ಪ್ರತಿಪಕ್ಷದವರು ತಮ್ಮ ಆರೋಪ ಮುಂದುವರಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧದ ಆರೋಪಗಳಿಗೆ ಅವರ ಬಳಿ ದಾಖಲೆಗಳಿಲ್ಲ. ಆದರೂ ತಮ್ಮ ಸುಳ್ಳುಗಳನ್ನೇ ಸತ್ಯ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆʼ ಎಂದು ಕಿಡಿಕಾರಿದರು.
Today I paid homage to late Sri. #ChudanathAyyar (78 years), former chief reporter of #Hosadigantha Newspaper in #Chikkamagalur. Later I participated in the #PressDay program organised by the press club of Chikkamagalur.
Addressing the gathering, I emphasized on the importance… pic.twitter.com/ML9hXey8MY
— KJ George (@thekjgeorge) July 29, 2024
"ಇಂತಹ ವಿಚಾರಗಳಲ್ಲಿ ಮಾಧ್ಯಮಗಳು ಸತ್ಯ ಸಂಗತಿಯನ್ನು ಬೆಳಕಿಗೆ ತರಬೇಕೆಂಬ ಉದ್ದೇಶದಿಂದ ನಾನು ಇಲ್ಲಿ ಪ್ರಸ್ತಾಪಿಸಿದ್ದೇನೆ. ಏಕೆಂದರೆ ಈ ಹಿಂದೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಹೊರಿಸಲಾಗಿತ್ತು. ಆದರೆ ಸಿಬಿಐ ತನಿಖೆ ನಡೆದು ನನ್ನನ್ನು ವಿಚಾರಣೆಗೂ ಕರೆಯಲಿಲ್ಲ. ಅಂತಿಮ ವರದಿಯಲ್ಲಿ ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲವೆಂದು ಸಿಬಿಐ ಹೇಳಿತ್ತು. ಆದರೆ ಮಾಧ್ಯಮಗಳು ಅದನ್ನು ಪ್ರಸಾರ ಮಾಡಲೇ ಇಲ್ಲ. ಮುಖ್ಯಮಂತ್ರಿಯವರ ಪ್ರಕರಣದಲ್ಲೂ ಈ ರೀತಿ ಆಗಬಾರದು" ಎಂದು ತಿಳಿಸಿದರು.
ಇದನ್ನೂ ಓದಿ: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ- ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
"ರಾಜಕಾರಣಿಗಳು ತಪ್ಪು ಮಾಡಿದಾಗ ಟೀಕಿಸುವುದು ಮಾಧ್ಯಮಗಳ ಜವವಾಬ್ದಾರಿ. ಅದೇ ರೀತಿ ಅವರು ಒಳ್ಳೆಯ ಕೆಲಸ ಮಾಡಿದಾಗಲೂ ಅದನ್ನು ಬೆಂಬಲಿಸಿ ಬೆನ್ನು ತಟ್ಟುವ ಕೆಲಸ ಮಾಡಬೇಕೆಂದು ಹೇಳಿದ ಅವರು, ಚಿಕ್ಕಮಗಳೂರು ಪತ್ರಕರ್ತರ ಸಂಘಕ್ಕೆ ನಿವೇಶನ ಮತ್ತು ಕಟ್ಟಡ ಒದಗಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಇದೇ ವೇಳೆ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ, ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ಪಾಲ್ಗೊಂಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.