Health benefits of ajwain water: ಸ್ಥೂಲಕಾಯದ ಸಮಸ್ಯೆ ಇರುವವರು ಮಲಗುವ ಮುನ್ನ ನೀರಿನಲ್ಲಿ ಓಂಕಾಳುಗಳನ್ನು ಕುದಿಸಿ ಕುಡಿದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುತ್ತದೆ. ರಾತ್ರಿ ವೇಳೆ ಅನೇಕರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.
Health Drink For Weight Loss: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪ್ರಸ್ತುತ ಸ್ಥೂಲಕಾಯದ ಸಮಸ್ಯೆ ಅನೇಕರನ್ನು ಕಾಡುತ್ತಿದೆ. ಹೆಚ್ಚಿನ ತೂಕವು ಎಲ್ಲಾ ರೀತಿಯ ಅಪಾಯಕಾರಿ ಕಾಯಿಲೆಗಳಿಗೆ ಮೂಲ. ಸ್ಥೂಲಕಾಯತೆಯು ಹೃದಯದ ತೊಂದರೆಗಳಿಗೆ ಕಾರಣವಾಗುತ್ತದೆ. ಹೀಗಾಗಿಯೇ ಸರಿಯಾದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸೂಚಿಸಲಾಗುತ್ತದೆ. ಬೊಜ್ಜು ಅಡುಗೆಮನೆಯಲ್ಲಿರುವ ಕೆಲ ಮನೆಮದ್ದುಗಳನ್ನು ಬಳಸುವುದರಿಂದ ಅಧಿಕ ತೂಕವನ್ನು ನಿಯಂತ್ರಣಕ್ಕೆ ತರಬಹುದು. ಪ್ರತಿದಿನ ಒಂದು ಲೋಟ ಈ ನೀರು ಕುಡಿದ್ರೆ ಸಾಕು ನಿಮ್ಮ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತದೆ. ಅದು ಯಾವ ನೀರು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಓಂಕಾಳು ನೀರು ಕುಡಿಯುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದೆ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಇದು ಶೀತ ಮತ್ತು ಮೈಗ್ರೇನ್ ತಲೆನೋವಿಗೆ ಉತ್ತಮ ಔಷಧಿ. ಓಂಕಾಳು ಪುಡಿಯನ್ನು ಬಟ್ಟೆಯಲ್ಲಿ ಕಟ್ಟಿಕೊಂಡು ಮೆಲ್ಲನೆ ವಾಸನೆ ನೋಡಿದರೆ ಸಮಸ್ಯೆ ಪರಿಹಾರವಾಗುತ್ತದೆ.
ಅಸ್ತಮಾ ರೋಗಿಗಳು ಓಂಕಾಳು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದು. ಹೃದ್ರೋಗಗಳನ್ನು ತಡೆಗಟ್ಟುವಲ್ಲಿ ಓಂಕಾಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
ಸ್ಥೂಲಕಾಯದ ಸಮಸ್ಯೆ ಇರುವವರು ಮಲಗುವ ಮುನ್ನ ನೀರಿನಲ್ಲಿ ಓಂಕಾಳುಗಳನ್ನು ಕುದಿಸಿ ಕುಡಿದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುತ್ತದೆ. ರಾತ್ರಿ ವೇಳೆ ಅನೇಕರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕೆ ಓಂಕಾಳು ನೀರು ಉತ್ತಮ ಪರಿಹಾರವಾಗಿದೆ.
ಬಿಸಿ ನೀರಿನಲ್ಲಿ ಓಂಕಾಳು ಕುದಿಸುವುದು ತುಂಬಾ ಪ್ರಯೋಜನಕಾರಿ. ಇದು ಹೊಟ್ಟೆಯನ್ನು ಶುದ್ಧೀಕರಿಸುವುದಲ್ಲದೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಓಂಕಾಳು ನೀರು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಕ್ಯಾಲೊರಿಗಳನ್ನು ಸುಡುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಕುದಿಸಿದ ಓಂಕಾಳು ನೀರು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಆಹಾರ ಬೇಗ ಜೀರ್ಣವಾಗುತ್ತದೆ. ಇದು ನಿಮ್ಮ ನಿದ್ರೆಗೆ ಭಂಗ ತರುವುದಿಲ್ಲ. ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಇದು ಉತ್ತಮ ಮನೆಮದ್ದು. ಇದು ದೇಹವು ನಿರ್ವಿಷಗೊಳಿಸುತ್ತದೆ ಮತ್ತು ತ್ಯಾಜ್ಯವನ್ನು ಹೊರಹಾಕುತ್ತದೆ. ದೇಹವು ನಿರ್ವಿಶೀಕರಣಗೊಂಡಾಗ ಚರ್ಮವು ಹೊಳೆಯುತ್ತದೆ. ಇದು ಮೊಡವೆಗಳು & ದದ್ದುಗಳನ್ನು ಕಡಿಮೆ ಮಾಡುವ ಮೂಲಕ ಚರ್ಮವನ್ನು ಆರೋಗ್ಯಕರವಾಗಿಡಲು ಸಹಕಾರಿ.