SSLC ಮತ್ತು PUC ಪರೀಕ್ಷೆಗೆ ದಿನಾಂಕ ಪ್ರಕಟ !ಈ ದಿನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಪರೀಕ್ಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮೂಲಕ ತಮ್ಮ ವಿದ್ಯಾರ್ಥಿಗಳ ವಿವರಗಳನ್ನು ಅಪ್ ಲೋಡ್ ಮಾಡುವಂತೆ ಸೂಚನೆ ನೀಡಲಾಗಿದೆ.   

Written by - Ranjitha R K | Last Updated : Oct 19, 2024, 12:17 PM IST
  • 2024-25 ನೇ ಸಾಲಿನ ಶೈಕ್ಷಣಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ತಯಾರಿ ನಡೆಸಿದೆ.
  • SSLC ಮತ್ತು PUC ಪರೀಕ್ಷೆ - 1 ಕ್ಕೆ ಪರೀಕ್ಷಾ ಮಂಡಳಿ ಸಿದ್ದತೆ
  • ಪರೀಕ್ಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಿವರ ಸಲ್ಲಿಸುವಂತೆ ಸೂಚನೆ
SSLC ಮತ್ತು PUC ಪರೀಕ್ಷೆಗೆ ದಿನಾಂಕ ಪ್ರಕಟ !ಈ ದಿನ ಪರೀಕ್ಷೆ ನಡೆಸಲು  ಶಿಕ್ಷಣ ಇಲಾಖೆ ನಿರ್ಧಾರ  title=

ಬೆಂಗಳೂರು : 2024-25 ನೇ ಸಾಲಿನ ಶೈಕ್ಷಣಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. SSLC ಮತ್ತು PUC ಪರೀಕ್ಷೆ - 1 ಕ್ಕೆ ಪರೀಕ್ಷಾ ಮಂಡಳಿ ಸಿದ್ದತೆ ನಡೆಸಿದೆ. ಈ ಬಾರಿ ಮಾರ್ಚ್ ನಲ್ಲಿ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಿದೆ. SSLC ಪರೀಕ್ಷೆ - 1 ರಲ್ಲಿ ಭಾಗಿಯಾಗಲಿರುವ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ.ಸರ್ಕಾರಿ, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 

ಪರೀಕ್ಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮೂಲಕ ತಮ್ಮ ವಿದ್ಯಾರ್ಥಿಗಳ ವಿವರಗಳನ್ನು ಅಪ್ ಲೋಡ್ ಮಾಡುವಂತೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಅಧಿಕೃತ ವೆಬ್ ಸೈಟ್ https://kseab.karnataka.gov.inಗೆ ಹೋಗಿ ತಮ್ಮ ವಿವರಗಳನ್ನು ಸಲ್ಲಿಸಬಹುದಾಗಿದೆ. 

ಇದನ್ನೂ ಓದಿ : NTROದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ ! Scientist ಹುದ್ದೆಗೆ 1.77 ಲಕ್ಷ ವೇತನ

ಈ ಬಗ್ಗೆ ಶಿಕ್ಷಣ ಇಲಾಖೆಯಾ ಪರೀಕ್ಷಾ ಮಂಡಳಿ ಎಲ್ಲಾ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿನೆ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ - 1ರ ನೋಂದಣಿ ಮತ್ತು ಶುಲ್ಕ ಪಾವತಿಗೂ  ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿ ಮಾಡುವ ಬಗೆಯೂ ಸೂಚನೆ ನೀಡಲಾಗಿದೆ. ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ , ಫಲಿತಾಂಶ ಅಭಿವೃದ್ಧಿ ಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ ನೋಂದಣಿ ಅವಕಾಶ ನೀಡಲಾಗಿದೆ. 

ಪರೀಕ್ಷಾ ಮಂಡಳಿ ನೀಡಿರುವ ಸೂಚನೆ ಪ್ರಕಾರ ಎಲ್ಲಾ ಕಾಲೇಜು ಪ್ರಾಂಶುಪಾಲರುಗಳು ವಿದ್ಯಾರ್ಥಿಗಳ ವಿವರಗಳನ್ನು ಅಪ್ ಲೋಡ್ ಮಾಡಬೇಕಾಗುತ್ತದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯನ್ನು ಕರ್ನಾಟಕ ಪರೀಕ್ಷಾ ಮಂಡಳಿಯಲ್ಲಿ ಮಾಡಬೇಕಾಗುತ್ತದೆ. 

ಇದನ್ನೂ ಓದಿ : ನಾಳೆ UGC NET ಜೂನ್ 2024 ಫಲಿತಾಂಶ ಪ್ರಕಟ ! ರಿಸಲ್ಟ್ ಇಲ್ಲಿ ಚೆಕ್ ಮಾಡಿಕೊಳ್ಳಿ

ಇನ್ನು ಈ ವರ್ಷ 5,8,9,11 ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯ ಟೆನ್ಶನ್ ಕೂಡಾ ಇರುವುದಿಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರನ್ನು ನಿರಾಳವಾಗುವಂತೆ ಮಾಡಿದೆ. ಹಿಂದಿನಂತೆಯೇ ಶಾಲಾ ಹಂತದಲ್ಲಿಯೇ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಹಾಗಾಗಿ ಈ ವರ್ಷ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್‌ಎ-2) ಪರೀಕ್ಷೆ ನಡೆಸಲಾಗುವುದು. 11ನೇ ತರಗತಿ ಅಂದರೆ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 

5,8,9,11ಬೋರ್ಡ್ ಪರೀಕ್ಷೆ  ಪ್ರಶ್ನಿಸಿ  ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂ ಕೋರ್ಟ್ ಕದ  ತಟ್ಟಿತ್ತು. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ವರ್ಷವೂ 5,8,9,11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು  ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News