Male Mahadeshwara Hills: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಲಿರುವ ಹಿನ್ನೆಲೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ದೀಪಾವಳಿ ಜಾತ್ರಾ ಮಹೋತ್ಸವ ಅಕ್ಟೋಬರ್ 29ರಿಂದ ಪ್ರಾರಂಭವಾಗಲಿದ್ದು, ಅಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಅ.30ರಂದು ದೀಪಾವಳಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಎಣ್ಣೆ ಮಜ್ಜನ ಸೇವೆ ವಿವಿಧ ಉತ್ಸವಗಳು ನಡೆಯಲಿದೆ. ಅ.31ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಗಳು ನಡೆಯಲಿದ್ದು, ನವೆಂಬರ್ 1ರಂದು ಅಮಾವಾಸ್ಯೆ ವಿಶೇಷ ಪೂಜೆ ಹಾಗೂ ಉತ್ಸವಗಳು ಜರುಗಲಿದೆ. ನವೆಂಬರ್ 2ರಂದು ಬೆಳಗ್ಗೆ ಮಹಾರಥೋತ್ಸವ ಜರುಗಲಿದ್ದು, ಅದೇ ದಿನ ರಾತ್ರಿ ಅಭಿಷೇಕದ ಪೂಜೆ ಮುಗಿದ ನಂತರ ಕೊಂಡೋತ್ಸವ ಜರುಗಲಿದೆ.
ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ 10 ಕಡೆ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಬೆಟ್ಟದ ಎರಡೂ ಕಡೆ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನದಲ್ಲಿ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಬಾರಿಗೆ 1.5 ಸಾವಿರ ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಇದಲ್ಲದೆ ಹಳೆ ದಾಸೋಹ ಭವನದ ಬಳಿ ವಿಶೇಷ ದಾಸೋಹ ಕೇಂದ್ರ ತೆರೆದು ದಿನದ 24 ಗಂಟೆಯೂ ದಾಸೋಹ ಏರ್ಪಡಿಸಲಾಗುತ್ತದೆ.
ಇದನ್ನೂ ಓದಿ: ವಕ್ಫ್ ಬೋರ್ಡ್ನಿಂದ ವಿಜಯಪುರ ರೈತರಿಗೆ ನೋಟಿಸ್: ಬಿಜೆಪಿಯಿಂದ ಸಮಿತಿ ರಚನೆ
ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಹೆಚ್ಚಿನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಸುಮಾರು ಆರರಿಂದ ಏಳು ಲಕ್ಷದವರೆಗೆ ಲಾಡು ತಯಾರು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಸುಮಾರು ಮೂರುವರೆ ಲಕ್ಷ ಲಾಡು ತಯಾರು ಮಾಡಿ ಸಂಗ್ರಹ ಮಾಡಲಾಗಿದೆ. ರಾಜಗೋಪುರದ ಎಡ ಹಾಗೂ ಬಲಭಾಗದಲ್ಲಿ ನೆರಳಿನ ವ್ಯವಸ್ಥೆ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶೌಚಾಲಯದ ಜೊತೆಗೆ ತಾಳು ಬೆಟ್ಟದಲ್ಲಿ 5 ಹಾಗೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ತಾತ್ಕಾಲಿಕ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.
ಇದಲ್ಲದೆ ದೇವಸ್ಥಾನದ ಆವರಣ ಹಾಗೂ ಜನಸಂದಣಿ ಇರುವ ಕಡೆ ಟ್ಯಾಂಕ್ ಮೂಲಕ ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತಾದಿಗಳು ಶುದ್ಧ ಕುಡಿಯುವ ನೀರನ್ನು ಕೇವಲ ಕುಡಿಯಲು ಬಳಸಬೇಕೆಂದು ಪ್ರಾಧಿಕಾರದ ಸಿಬ್ಬಂದಿಗಳು ಮನವಿ ಮಾಡಿದ್ದಾರೆ. ದೇವಸ್ಥಾನದ ರಾಜಗೋಪುರ ಮುಂಭಾಗ ಹಾಗೂ ಅತಿಥಿ ಗಣ್ಯರ ಮುಖ್ಯದ್ವಾರ ರಂಗಮಂದಿರ ಹಾಗೂ ಭಕ್ತಾದಿಗಳು ಜನಸಂದಣಿ ಇರುವ ಕಡೆ ಸ್ವಚ್ಛತೆ ಕಾಪಾಡಲು ಹೆಚ್ಚು ಪೌರಕಾರ್ಮಿಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
350 ಬಸ್ಗಳ ಸೇವೆ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ KSRTC ವತಿಯಿಂದ 350 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಕೆಟ್ಟು ನಿಂತರೆ ದುರಸ್ತಿಪಡಿಸಲು 50 ಜನ ತಾಂತ್ರಿಕ ಸಿಬ್ಬಂದಿಗಳನ್ನು ಸಹ ನೇಮಕ ಮಾಡಿಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ಅಶೋಕ್ ತಿಳಿಸಿದ್ದಾರೆ. ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ರಾಜಗೋಪುರದ ಮಹಾದ್ವಾರದ ಬಳಿ ಪ್ರತ್ಯೇಕ ಕ್ಯೂ ಲೈನ್, 60 ವರ್ಷ ಮೇಲ್ಪಟ್ಟವರಿಗೆ ಆಲಂಬಾಡಿ ಬಸವೇಶ್ವರ ಸ್ವಾಮಿಯ ಸಮೀಪ ಪ್ರತ್ಯೇಕ ಕ್ಯೂ ಲೈನ್, ಅತಿಥಿ ಗಣ್ಯರಿಗೆ ಗೇಟ್ ನಂಬರ್ ನಾಲ್ಕರಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರಂಭ, ಸಿಎಂ ಕೂಡಲೇ ಸ್ಪಷ್ಟನೆ ನೀಡಲಿ: ಆರ್.ಅಶೋಕ ಆಗ್ರಹ
ದ್ವಿಚಕ್ರ ವಾಹನ ನಿರ್ಬಂಧ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ವಿಚಕ್ರ ವಾಹನದಲ್ಲಿ ಆಗಮಿಸುವ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಲಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ಅಕ್ಟೋಬರ್ 29ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 2ರ ಸಂಜೆ ಆರು ಗಂಟೆಯವರೆಗೆ ಶ್ರೀ ಕ್ಷೇತ್ರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವುದನ್ನು ನಿರ್ಬಂಧ ವಿಧಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೋಗುವ ಭಕ್ತಾದಿಗಳಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಆನಂತರ KSRTC ಬಸ್ ಮೂಲಕ ಶ್ರೀ ಕ್ಷೇತ್ರಕ್ಕೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಾರ್ಯದರ್ಶಿ ರಘು ತಿಳಿಸಿದ್ದಾರೆ.
ಸೂಕ್ತ ಪೊಲೀಸ್ ಬಂದೋಬಸ್ತ್
ಲಕ್ಷಾಂತರ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಬ್ಬರು DYSP, 7 ಇನ್ಸ್ಪೆಕ್ಟರ್, 34 SI, 52 ASI, 227 ಪೇದೆಗಳು, 38 ಮಹಿಳಾ ಪೇದೆಗಳು, 238 ಗೃಹ ರಕ್ಷಕ ದಳ ಸಿಬ್ಬಂದಿ, 3 DR ಮತ್ತು ಒಬ್ಬರು KSRP ವಾಹನದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.