ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ವಿರುದ್ಧ ಭೂ ಕಬಳಿಕೆ ಆರೋಪ

Land Grabbing Allegation: ಗುಂಡ್ಲುಪೇಟೆ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ನಿರಂಜನಕುಮಾರ್  ಅವರು, ಪುರಸಭೆ ಜಾಗದಲ್ಲಿ ಶಾಸಕ ಗಣೇಶ್ ಪ್ರಸಾದ್ ಸೋದರದತ್ತೆ ಹೆಸರಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ವಿವಾದ ಉಂಟಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಹಿನ್ನೆಲೆಯಲ್ಲಿ ಮಹದೇವಪ್ರಸಾದ್ ಅವರೇ ಕಟ್ಟಡ ಕಟ್ಟದಂತೆ ಸೂಚಿಸಿದ್ದರು.

Written by - Yashaswini V | Last Updated : Dec 3, 2024, 11:50 AM IST
  • ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ವಿರುದ್ಧ ಮಾಜಿ ಶಾಸಕ ನಿರಂಜನಕುಮಾರ್ ಗಂಭೀರ ಆರೋಪ
  • ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿ-766ಕ್ಕೆ ಹೊಂದಿಕೊಂಡಂತ್ತಿರುವ ಸುಮಾರು 5 ಕೋಟಿ ಬೆಲೆ ಬಾಳುವ ಪುರಸಭೆ ಜಾಗ ಶಾಸಕ ಕುಟುಂಬದಿಂದ
    ಒತ್ತುವರಿ
  • ಗ್ರಾಮ ಪಂಚಾಯಿತಿ ಸದಸ್ಯರ ದೂರು, ಪುರಸಭೆ ನೊಟೀಸ್‍ಗೂ ಶಾಸಕರ ಸಂಬಂಧಿಕರು ಕ್ಯಾರೆ ಎನ್ನುತ್ತಿಲ್ಲ ಎಂದು ಕಿಡಿ
ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ವಿರುದ್ಧ ಭೂ ಕಬಳಿಕೆ ಆರೋಪ title=

Gundlupet MLA: ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ-766ಕ್ಕೆ ಹೊಂದಿಕೊಂಡಂತ್ತಿರುವ ಸುಮಾರು 5 ಕೋಟಿ ಬೆಲೆ ಬಾಳುವ ಪುರಸಭೆ ಜಾಗವನ್ನು ಶಾಸಕರ ಕುಟುಂಬದವರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮಳಿಗೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು.

ಗುಂಡ್ಲುಪೇಟೆ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ನಿರಂಜನಕುಮಾರ್  ಅವರು, ಪುರಸಭೆ ಜಾಗದಲ್ಲಿ ಶಾಸಕ ಗಣೇಶ್ ಪ್ರಸಾದ್ ಸೋದರದತ್ತೆ ಹೆಸರಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ವಿವಾದ ಉಂಟಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಹಿನ್ನೆಲೆಯಲ್ಲಿ ಮಹದೇವಪ್ರಸಾದ್ ಅವರೇ ಕಟ್ಟಡ ಕಟ್ಟದಂತೆ ಸೂಚಿಸಿದ್ದರು. ವಕೀಲರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ದೂರಿನ ಹಿನ್ನೆಲೆಯಲ್ಲಿ ನ.6ರಂದು ಜಾಗಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಪುರಸಭೆಯವರು ನೀಡಿರುವ ನೊಟೀಸ್‍ಗೂ ಮಾಲೀಕರು ಬೆಲೆ ಕೊಡುತ್ತಿಲ್ಲ. ನಮ್ಮಲ್ಲೂ ಮೂಡಾದಂತೆ ಹಗರಣ ಆಗುವುದು ಬೇಡ ಎಂದು ಎಚ್ಚರಿಸಿದರು. 

ಇದನ್ನೂ ಓದಿ- ಫೆಂಗಲ್ ಚಂಡಮಾರುತ ಅಪಾಯದ ಮುನ್ಸೂಚನೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

ಕ್ಷೇತ್ರದ ಜನತೆ ಅಧಿಕಾರ ನೀಡಿರುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು. ಆದರೆ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಶಾಸಕ ಗಣೇಶಪ್ರಸಾದ್ ಸಂಬಂಧಿಕರು ಸರ್ಕಾರದ ಆಸ್ತಿಯನ್ನು ಕಬಳಿಸುತ್ತಿದ್ದಾರೆ. ಈ ಹಿಂದೆ ಸಂಗಮ ಪ್ರತಿಷ್ಠಾನದ ಹೆಸರಿನಲ್ಲಿ ಪಡೆದ ಪುರಸಭೆ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಿ ಬಾಡಿಗೆಗೆ ಕೊಟ್ಟಿದ್ದಾರೆ. ಸಂಗಮ ಪ್ರತಿಷ್ಟಾನ ಈಗ ಫ್ಯಾಮಿಲಿ ಟ್ರಸ್ಟ್ ಆಗಿದೆ. ಇದೀಗ ಪುರಸಭೆಗೆ ಸೇರಿದ ನಿವೇಶನದಲ್ಲಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲು ಪುರಸಭೆಯಿಂದ ಯಾವುದೇ ಪರವಾನಗಿ ಪಡೆದಿಲ್ಲ ಜೊತೆಗೆ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ- ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ.ಕೆ. ಸುರೇಶ್

ಪುರಸಭೆ ಅಧಿಕಾರಿಗಳು ಯಾರ ಕೈಗೊಂಬೆಯಾಗಿ ಕೆಲಸ ಮಾಡಬೇಡಿ. ಕಾನೂನಿನ ಪ್ರಕಾರ ಕರ್ತವ್ಯ ನಿರ್ವಹಿಸಿ. ಒತ್ತುವರಿ ಮಾಡಿ ಕಟ್ಟಡ ಕಟ್ಟುತ್ತಿರುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿ ಹಾಗು ನಗರಾಭಿವೃದ್ಧಿ ಇಲಾಖೆ ಆಯುಕ್ತರಿಗೆ ದೂರು ನೀಡಲಾಗಿದೆ. ಕೂಡಲೇ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News