ಬೆಂಗಳೂರು : ಬೊಜ್ಜು ಇಂದಿನ ಆಧುನಿಕ ಜಗತ್ತಿನಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿ ಸ್ಥೂಲಕಾಯತೆಗೆ ಪ್ರಮುಖ ಕಾರಣವಾಗಿದೆ.
ಸ್ಥೂಲಕಾಯತೆಯು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯಾಘಾತದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಹೊಟ್ಟೆಯ ಕೊಬ್ಬು ದೊಡ್ಡ ಸಮಸ್ಯೆಯಾಗುತ್ತಿದೆ. ಅನೇಕ ಜನರು ತೂಕ ಇಳಿಸಿಕೊಳ್ಳಲು ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಇಂದು ನಾವು 20 ದಿನಗಳಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ವಿಧಾನಗಳ ಬಗ್ಗೆ ಹೇಳಲಿದ್ದೇವೆ.
ಸಮತೋಲಿತ ಆಹಾರವನ್ನು ಸೇವಿಸಿ :
ತೂಕ ಹೆಚ್ಚಾಗಲು ಇರುವ ಅತಿ ದೊಡ್ಡ ಕಾರಣಗಳೆಂದರೆ ಜಂಕ್ ಫುಡ್ ಗಳು ಮತ್ತು ಫಾಸ್ಟ್ ಫುಡ್ ಗಳು. ಹಾಗಾಗಿ ತೂಕ ಇಳಿಸಿಕೊಳ್ಳುವುದು ನಿಮ್ಮ ಪ್ರಾಮುಖ್ಯತೆಯಾಗಿದ್ದರೆ, ಮನೆಯಲ್ಲಿಯೇ ತಯಾರಿಸಿದ ಆಹಾರವನ್ನು ಸೇವಿಸಬೇಕು. ಕರಿದ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ.
ಇದನ್ನೂ ಓದಿ : ಸಿಹಿಯಾದ ರಸಭರಿತ ಈ ಹಣ್ಣಿನಲ್ಲಿದೆ ಮಧುಮೇಹ ಗುಣಪಡಿಸುವ ಶಕ್ತಿ; ವರ್ಷಕ್ಕೊಮ್ಮೆ ತಿಂದರೂ ಸಾಕು ಬ್ಲಡ್ ಶುಗರ್ ಬರೋದೇ ಇಲ್ಲ!
ಹಣ್ಣುಗಳಿಗೊಂದು ಸ್ಥಾನ ಇರಲಿ :
ಆಹಾರದಲ್ಲಿ ಹಣ್ಣುಗಳನ್ನು ಸೇರಿಸುವುದರಿಂದ ಹಲವಾರು ರೀತಿಯಲ್ಲಿ ಪ್ರಯೋಜನವಾಗುವುದು. ಫೈಬರ್ ಭರಿತ ಹಣ್ಣುಗಳು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಬೆಳಿಗ್ಗೆ ಮತ್ತು ಸಂಜೆಯ ಉಪಹಾರದಲ್ಲಿ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ತೂಕವನ್ನು ಸಾಕಷ್ಟು ಮಟ್ಟದಲ್ಲಿ ಕಡಿಮೆ ಮಾಡಬಹುದು.
ವ್ಯಾಯಾಮ ಅತ್ಯಗತ್ಯ :
ಆಹಾರ ಸೇವನೆ ಎಷ್ಟು ಮುಖ್ಯವೋ ದೈನಂದಿನ ವ್ಯಾಯಾಮ ಕೂಡಾ ಅಷ್ಟೇ ಅಗತ್ಯ. ಸಾಮಾನ್ಯವಾಗಿ, ದಿನಕ್ಕೆ 40 ನಿಮಿಷಗಳ ವ್ಯಾಯಾಮವು ಉತ್ತಮ ಆರೋಗ್ಯಕ್ಕೆ ಅಗತ್ಯವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಮತ್ತು ವೇಗವಾಗಿ ತೂಕವನ್ನು ಕಳೆದುಕೊಳ್ಳಲು,ಕನಿಷ್ಠ 40 ನಿಮಿಷಗಳ ಕಾಲ ವ್ಯಾಯಾಮ ಮಾಡಬೇಕು.
ಸಾಕಷ್ಟು ನಿದ್ರೆ :
ಇಂದಿನ ಆಧುನಿಕ ಜಗತ್ತಿನಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನಿದ್ರೆಯ ಪ್ರಮಾಣ ಮತ್ತು ಗುಣಮಟ್ಟ ಕಡಿಮೆಯಾಗುತ್ತಿದೆ. ಇದರ ನೇರ ಪರಿಣಾಮವಾಗಿ, ದೇಹದ ತೂಕ ಹೆಚ್ಚಾಗುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಜನರು ಪ್ರತಿದಿನ ಕನಿಷ್ಠ 7-8 ಗಂಟೆಗಳ ನಿದ್ದೆ ಮಾಡಬೇಕು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಇವುಗಳಿಂದ ದೂರವಿರಿ :
ತೂಕವನ್ನು ಕಳೆದುಕೊಳ್ಳಲು ಸರಿಯಾದ ಆಹಾರವನ್ನು ಆಯ್ಕೆಮಾಡುವುದು ಎಷ್ಟು ಮುಖ್ಯವೋ, ಕೆಲವು ವಿಷಯಗಳನ್ನು ತ್ಯಜಿಸುವುದು ಸಹ ಮುಖ್ಯವಾಗಿದೆ. ವೇಗವಾಗಿ ತೂಕವನ್ನು ಕಳೆದುಕೊಳ್ಳಬೇಕಾದರೆ ಆಹಾರದಿಂದ ಮೂರು ಬಿಳಿ ಆಹಾರವನ್ನು ತ್ಯಜಿಸಬೇಕು. ಸಕ್ಕರೆ, ಮೈದಾ ಮತ್ತು ಹೆಚ್ಚಿನ ಉಪ್ಪು. ಇದು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
( ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಅವಲಂಬಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಬೇಕು. Zee ಮೀಡಿಯಾ ಈ ಮಾಹಿತಿಯನ್ನು ದೃಢೀಕರಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ