ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ

Om Prakash Chautala passes away: ಓಂ ಪ್ರಕಾಶ್ ಚೌತಾಲಾ ಅವರು ಹರ್ಯಾಣದ ಗುರುಗ್ರಾಮದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

Written by - Savita M B | Last Updated : Dec 20, 2024, 01:01 PM IST
  • ಓಂ ಪ್ರಕಾಶ್ ಚೌಟಾಲ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ
  • ಓಂ ಪ್ರಕಾಶ್ ಚೌಟಾಲಾ ಅವರು ಹರಿಯಾಣದ ಏಳನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ title=

Former Haryana CM: ಭಾರತೀಯ ರಾಷ್ಟ್ರೀಯ ಲೋಕದಳ (INLD) ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರು ಶುಕ್ರವಾರ, ಡಿಸೆಂಬರ್ 20 ರಂದು ಗುರುಗ್ರಾಮ್‌ನಲ್ಲಿ 89 ನೇ ವಯಸ್ಸಿನಲ್ಲಿ ನಿಧನರಾದರು. ಓಂ ಪ್ರಕಾಶ್ ಚೌಟಾಲ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.. ಈ ವರ್ಷದ ಅಕ್ಟೋಬರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಓಂ ಪ್ರಕಾಶ್ ಚೌತಾಲಾ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. 

ಇನ್ನು ಭಾರತದ ಮಾಜಿ ಉಪ ಪ್ರಧಾನಿ ಚೌಧರಿ ದೇವಿ ಲಾಲ್ ಅವರ ಪುತ್ರ ಓಂ ಪ್ರಕಾಶ್ ಚೌಟಾಲಾ ಅವರು ಹರಿಯಾಣದ ಏಳನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 27 ಮೇ 2022 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ನ್ಯಾಯಾಲಯವು 16 ವರ್ಷಗಳಷ್ಟು ಹಳೆಯದಾದ ಅಕ್ರಮ ಆಸ್ತಿ ಪ್ರಕರಣದಲ್ಲಿ ಚೌಟಾಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.. ಅವರನ್ನು 2020 ರಲ್ಲಿ ಬಿಡುಗಡೆ ಮಾಡಲಾಗಿತ್ತು.. 

ಇದನ್ನೂ ಓದಿ-ನಿವೃತ್ತಿ ಬಳಿಕವೂ ಆರ್ ಅಶ್ವಿನ್ ಮೇಲಾಗುವುದು ಹಣದ ಸುರಿಮಳೆ !BCCI ನೀಡುವ ಹಣದ ಮೊತ್ತ ಎಷ್ಟಿದೆ ಗೊತ್ತಾ ?

ಓಂ ಪ್ರಕಾಶ್ ಅವರ ಪತ್ನಿ ಸ್ನೇಹ ಲತಾ ಅವರು ಆಗಸ್ಟ್ 2019 ರಲ್ಲಿ ನಿಧನರಾದರು. ಈ ದಂಪತಿಗೆ ಅಭಯ್ ಸಿಂಗ್ ಮತ್ತು ಅಜಯ್ ಸಿಂಗ್ ಸೇರಿದಂತೆ ಮೂವರು ಪುತ್ರಿಯರು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಅಭಯ್ ಸಿಂಗ್ ಚೌಟಾಲಾ ಅವರು ಹರಿಯಾಣದ ಎಲೆನಾಬಾದ್ ಕ್ಷೇತ್ರದ ಶಾಸಕರಾಗಿದ್ದಾರೆ.. ಅಲ್ಲದೇ ಅಕ್ಟೋಬರ್ 2014 ರಿಂದ ಮಾರ್ಚ್ 2019 ರವರೆಗೆ ಹರಿಯಾಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.. 

ಓಂ ಪ್ರಕಾಶ್ ಚೌಟಾಲಾ ಅವರ ಮೊಮ್ಮಗ, ದುಶ್ಯಂತ್ ಅವರು ಜನತಾ ಪಕ್ಷದ ನಾಯಕರಾಗಿದ್ದಾರೆ ಮತ್ತು ಹರಿಯಾಣದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಹಿಸಾರ್ ಕ್ಷೇತ್ರದಿಂದ ಲೋಕಸಭೆಯ ಮಾಜಿ ಸಂಸದರೂ ಆಗಿದ್ದಾರೆ. 

ಇದನ್ನೂ ಓದಿ-ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News