BPL Card: ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿ ಬಹಳ ಮಹತ್ವದ ದಾಖಲೆಯಾಗಿದೆ. ಪಡಿತರ ಚೀಟಿ ಕುರಿತು ಆಗುವ ಪ್ರತಿ ಬದಲಾವಣೆಯನ್ನು ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ. ಇದೀಗ ರಾಜ್ಯದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ರೇಷನ್ ಕಾರ್ಡ್ ಸಂಬಂಧಿಸಿದಂತೆ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಮೇಲೆ ಹೇಳಿದಂತೆ ರಾಜ್ಯ ಸರ್ಕಾರದ ಹಲವು ಯೋಜನೆಗಳ ಫಲಾನುಗಳಾಗಬಹುದು ಎನ್ನುವ ಕಾರಣಕ್ಕೆ ಕೆಲವರು ನಕಲಿ ದಾಖಲೆಗಳನ್ನು ಕೊಟ್ಟು ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಇಂಥ ಅಕ್ರಮ ಕಾರ್ಡುಗಳನ್ನು ರದ್ದು ಮಾಡುವುದಾಗಿ ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಿಸಿತ್ತು. ಇದರಿಂದ ಕೆಲವು ಅರ್ಹ ಫಲಾನುಭವಿಗಳು ಕೂಡ ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟಿಕರಣ ನೀಡಿದೆ.
ಇದನ್ನೂ ಓದಿ- Income Tax Notice: ಉಳಿತಾಯ ಖಾತೆಯಲ್ಲಿ ಲಿಮಿಟ್ ಗಿಂತ ಹೆಚ್ಚಿನ ಹಣ ಡಿಪಾಸಿಟ್ ಮಾಡಿದರೆ ಬರುತ್ತೆ 'ಐಟಿ ನೋಟೀಸ್'...!
ಅನರ್ಹ ಫಲಾನುಭವಿಗಳನ್ನು ಗುರುತಿಸಲು ರಾಜ್ಯ ಸರ್ಕಾರ ಇತ್ತೀಚಿಗೆ ರೇಷನ್ ಕಾರ್ಡ್ ಹೊಂದಿರುವವರು ಪಡಿತರ ಪದಾರ್ಥಗಳನ್ನು ಪಡೆದುಕೊಳ್ಳಲು ಕುಟುಂಬದ ಸರ್ವ ಸದಸ್ಯರ ಸಂಬಳಕ್ಕೆ ಸಂಬಂಧಿಸಿದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಕೊಡಬೇಕು ಎಂದು ಹೇಳಿತ್ತು. ಈಗ ರಾಜ್ಯ ಸರ್ಕಾರ ಸಂಬಳಕ್ಕೆ ಸಂಬಂಧಿಸಿದ ಪ್ರಮಾಣಪತ್ರ ನೀಡುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ- ರೇಷನ್ ಕಾರ್ಡ್ ಇಲ್ಲದೇ ಇದ್ದರೂ ರೇಷನ್ ಪಡೆಯಬಹುದು, ಹೇಗೆ ಗೊತ್ತಾ?
ಇತ್ತೀಚೆಗೆ ಈ ಬಗ್ಗೆ ಮಾತನಾಡಿರುವ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಅನರ್ಹ ಪಡಿತರ ಕಾರ್ಡುಗಳ ಬಗ್ಗೆ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಸರ್ಕಾರಿ ನೌಕರರು ರೇಷನ್ ಕಾರ್ಡ್ ಪಡೆದಿದ್ದರೆ ಅಂತಹ ಕಾರ್ಡುಗಳನ್ನು ರದ್ದು ಮಾಡಲಾಗುವುದು. ವಾರ್ಷಿಕವಾಗಿ ಯಾರ ಆದಾಯ 1.20 ಲಕ್ಷ ರೂಪಾಯಿ ಇರುತ್ತದೆಯೋ ಅಂಥವರ ಬಿಪಿಎಲ್ ಕಾರ್ಡುಗಳು ರದ್ದಾಗಲಿವೆ ಎಂದಿದ್ದಾರೆ.
ಇದೇ ವೇಳೆ ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಪಡಿತರ ಚೀಟಿಗಳನ್ನು ರದ್ದು ಮಾಡುವುದಿಲ್ಲ. ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಕೂಡ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ. ಅನರ್ಹ ಫಾಲಾನುಭವಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಕಾರಣಕ್ಕಾಗಿ ಪಡಿತರ ಪದಾರ್ಥಗಳನ್ನು ಕೊಡುವುದು ತಡವಾಗುತ್ತಿತ್ತು. ಮುಂದೆ ಇಂಥ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ವಿವರಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.