Makar Sankranti School and Bank Holiday: ಮಕರ ಸಂಕ್ರಾಂತಿ ಹಬ್ಬ ಬಂದರೆ ಸಾಕು ಎಲ್ಲಿಲ್ಲದ ಸಂಭ್ರಮ ಮನೆ ಮಾಡುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಹಿಂದೂಗಳ ಮೊದಲ ಹಬ್ಬ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಮಕರ ಸಂಕ್ರಾಂತಿ ಹಬ್ಬ ಬಂದರೆ ಸಾಕು ಎಲ್ಲಿಲ್ಲದ ಸಂಭ್ರಮ ಮನೆ ಮಾಡುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಹಿಂದೂಗಳ ಮೊದಲ ಹಬ್ಬ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಗುಜರಾತ್ ಮತ್ತು ಮಹರಾಷ್ಟ್ರಗಳಲ್ಲಿ ಗಾಳಿಪಟ ಹಾರಿಸುವ ʼಕೈಟ್ ಫೆಸ್ಟ್ʼ ಎಂದು ಆಚರಿಸಿದರೆ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಸಂಕ್ರಾಂತಿ ಆಚರಿಸುತ್ತಾರೆ. ಅದರಲ್ಲೂ ತಮಿಳುನಾಡಿನ ಜನರು ಇದನ್ನು ಪೊಂಗಲ್ ಹಬ್ಬ ಎಂದು ಕರೆಯುತ್ತಾರೆ. ಇವರಿಗೆ ಇದು ಪ್ರಮುಖ ಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ರಾಜ್ಯ ಸರ್ಕಾರ ಸತತ 6 ದಿನಗಳ ರಜೆಯನ್ನು ಘೋಷಣೆ ಮಾಡಿದೆ.
ಮಕರ ಸಂಕ್ರಾಂತಿ ಈ ಬಾರಿ ಜನವರಿ 14ರಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜನವರಿ 17 (ಶುಕ್ರವಾರ) ವನ್ನು ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿ ಪೊಂಗಲ್ ರಜೆಯನ್ನು ವಿಸ್ತರಿಸಲು ಆದೇಶಿಸಿದ್ದಾರೆ.
ಜನವರಿ 14 ಮತ್ತು ಜನವರಿ 19 ರ ನಡುವೆ ಜನವರಿ 14 (ಮಂಗಳವಾರ) ಪೊಂಗಲ್ ದಿನ, ಜನವರಿ 15 (ಬುಧವಾರ- ತಿರುವಳ್ಳುವರ್ ದಿನ), ಜನವರಿ 16 (ಗುರುವಾರ - ಉಳವರ್ ತಿರುನಾಳ್), ಜನವರಿ 18 (ಶನಿವಾರ) ಮತ್ತು ಜನವರಿ 19 (ಭಾನುವಾರ) ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಮಕರ ಸಂಕ್ರಾಂತಿಯು ಭಾರತದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಹಬ್ಬಗಳಲ್ಲಿ ಒಂದು. ಋತುವಿನ ಹೊಸ ಸುಗ್ಗಿಯ ಸಂಕೇತವಾಗಿ ಈ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತದೆ.
ಮಕರ ಸಂಕ್ರಾಂತಿ ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ 14 ರಂದು ಬರುತ್ತದೆ. ಆದರೆ ಕಳೆದ 2-3 ವರ್ಷಗಳಲ್ಲಿ ಜನವರಿ 15ರಂದು ಆಚರಿಸಲಾಗಿತ್ತು. ಭಾರತದಲ್ಲಿ ಚಳಿಗಾಲದ ಅಂತ್ಯ ಮತ್ತು ಸುಗ್ಗಿಯ ಋತುವಿನ ಆರಂಭವನ್ನು ಈ ಹಬ್ಬ ಸೂಚಿಸುತ್ತದೆ. ಜನರು ಸಾಮಾನ್ಯವಾಗಿ ಈ ದಿನ ಪುಣ್ಯ ಕಾಲ ಮುಹೂರ್ತದಲ್ಲಿ ಧಾರ್ಮಿಕ ವಿಧಿಗಳನ್ನು ನಡೆಸುತ್ತಾರೆ. ದೃಕ್ಪಂಚಾಂಗ್ ಪ್ರಕಾರ 9:03 AM ಮತ್ತು 06:21 PM ಕ್ಕೆ ಈ ಶುಭ ಮುಹೂರ್ತ ಕೊನೆಗೊಳ್ಳುತ್ತದೆ.
ಇನ್ನು ಮಕರ ಸಂಕ್ರಾಂತಿ ರಾಷ್ಟ್ರೀಯ ರಜಾದಿನವಲ್ಲ. ಆದರೆ ಇದನ್ನು ಭಾರತದಾದ್ಯಂತ ಹಲವಾರು ರಾಜ್ಯಗಳಲ್ಲಿ ರಜಾದಿನವಾಗಿ ಆಚರಿಸಲಾಗುತ್ತದೆ. ಕರ್ನಾಟಕ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಭಾರತದ ಇತರ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಅಥವಾ ಅದರ ಪ್ರಾದೇಶಿಕ ಸಮಾನತೆಗಾಗಿ ಬ್ಯಾಂಕ್ಗಳು ಮತ್ತು ಕಚೇರಿಗಳು ಮುಚ್ಚುವ ಸಾಧ್ಯತೆ ಇದೆ.