ತುಳು ಭಾಷೆಯನ್ನು 2 ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರ ಚಿಂತನೆ - ಸಿಎಂ ಸಿದ್ದರಾಮಯ್ಯ

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ.ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರ್ಕಾರ ಶ್ರಮಿಸಿತು.ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಹೇಳಿದರು.

Written by - Manjunath N | Last Updated : Jan 11, 2025, 10:27 PM IST
  • ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ.
  • ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ.
  • 24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ.
ತುಳು ಭಾಷೆಯನ್ನು 2 ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರ ಚಿಂತನೆ - ಸಿಎಂ ಸಿದ್ದರಾಮಯ್ಯ title=

ಉಳ್ಳಾಲ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ.ಇದು ಸರ್ವರ ಸಂಭ್ರಮ.ನಮ್ಮ ದೇಶ ಬಹುತ್ವದ ದೇಶ‌.ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ.ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಶ್ಲಾಘಿಸಿದರು.

ಇದನ್ನೂ ಓದಿ: ವಿಜಯಪುರದಲ್ಲೂ ತಲೆ ಎತ್ತಲಿದೆ ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ..!

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ.ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂ.ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ.ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ.ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರ್ಕಾರ ಶ್ರಮಿಸಿತು.ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಹೇಳಿದರು.

ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ.ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ.ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ.24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ.ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು.ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಹೇಳಿದರು.

ಇದನ್ನೂ ಓದಿ: 'ಮೈಸೂರು ವಿವಿ ಡಾಕ್ಟರೇಟ್‌ ನೀಡಲು ಮುಂದೆ ಬಂದಾಗ ಅದನ್ನೇ ಬೇಡ ಅಂದಿದ್ದೆ'

ಯು.ಟಿ.ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹1,000 ಕೋಟಿಯಷ್ಟು ಅನುದಾನ ತಂದಿದ್ದಾರೆ.ಕ್ಷೇತ್ರದ ಬಗ್ಗೆ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News