ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ.‌. ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್

Eddelu Manjunatha: ಕನ್ನಡದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಅವರ ಕೊನೆ ಕನಸು  ಎದ್ದೇಳು ಮಂಜುನಾಥ 2 ಬಿಡುಗಡೆಗೆ ಸಿದ್ಧವಾಗಿದೆ. 2009ರಲ್ಲಿ ತೆರೆಕಂಡ 'ಎದ್ದೇಳು  ಮಂಜುನಾಥ' ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಅಭಿನಯಿಸಿ ಮೋಡಿ ಮಾಡಿದ್ದರು. ಈಗ ಎದ್ದೇಳು ಮಂಜುನಾಥ್-2ಗೆ ಗುರುಪ್ರಸಾದ್ ಅವರೇ ಕಥೆ ಬರೆದು ನಿರ್ದೇಶನದ ಜೊತೆ ನಾಯಕನಾಗಿಯೂ ನಟಿಸಿದ್ದಾರೆ.

Written by - Zee Kannada News Desk | Last Updated : Jan 12, 2025, 07:32 PM IST
  • ಕನ್ನಡದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಅವರ ಕೊನೆ ಕನಸು ಎದ್ದೇಳು ಮಂಜುನಾಥ 2 ಬಿಡುಗಡೆಗೆ ಸಿದ್ಧವಾಗಿದೆ.
  • ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಅಭಿನಯಿಸಿ ಮೋಡಿ ಮಾಡಿದ್ದರು.
ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ.‌. ಎದ್ದೇಳು ಮಂಜುನಾಥ್-2 ಚಿತ್ರದ ಕಿತ್ತೋದ ಪ್ರೇಮ ಹಾಡು ರಿಲೀಸ್ title=

Eddelu Manjunatha: ಕನ್ನಡದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಅವರ ಕೊನೆ ಕನಸು  ಎದ್ದೇಳು ಮಂಜುನಾಥ 2 ಬಿಡುಗಡೆಗೆ ಸಿದ್ಧವಾಗಿದೆ. 2009ರಲ್ಲಿ ತೆರೆಕಂಡ 'ಎದ್ದೇಳು  ಮಂಜುನಾಥ' ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಅಭಿನಯಿಸಿ ಮೋಡಿ ಮಾಡಿದ್ದರು. ಈಗ ಎದ್ದೇಳು ಮಂಜುನಾಥ್-2ಗೆ ಗುರುಪ್ರಸಾದ್ ಅವರೇ ಕಥೆ ಬರೆದು ನಿರ್ದೇಶನದ ಜೊತೆ ನಾಯಕನಾಗಿಯೂ ನಟಿಸಿದ್ದಾರೆ. ಈ ಚಿತ್ರದ ಕಿತ್ತೋದ ಪ್ರೇಮ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಈ ವೇಳೆ ನಿರ್ದೇಶಕರಾದ ಸಿಂಪಲ್ ಸುನಿ, ನಿರ್ಮಾಪಕ ಉದಯ್ ಕೆ ಮೆಹ್ತಾ ಎದ್ದೇಳು ಮಂಜುನಾಥ್ -2 ಗೆ ಶುಭ ಹಾರೈಸಿದರು.

ಬಳಿಕ ಹಿರಿಯ ಕಲಾವಿದರಾದ ಶರತ್ ಲೋಹಿತಾಶ್ವ ಮಾತನಾಡಿ,ಗುರುಪ್ರಸಾದ್ ಇದ್ದಿದ್ದರೆ ಈ ಆಡಿಟೋರಿಯಂನಲ್ಲಿ ನಗು, ಅವರ ಓಡಾಟ, ಅಬ್ಬರ ಎಲ್ಲಾ ಇರುತಿತ್ತೇನೋ? ನಾವು ಇಂದು ಅದೆಲ್ಲವನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾನು ಅವರನ್ನು ಅಭಿಮಾನಿಯಾಗಿ ನೋಡಿದ್ದೆ. ಅವರ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿಲ್ಲ. ನಾನು ಹಿಂದೆ ಹಲವು ಬಾರಿ ಹೇಳಿದ್ದೇನೆ. ನಮ್ಮ ತಂದೆ ಮಠ, ಎದ್ದೇಳು ಮಂಜುನಾಥ್ ಸಿನಿಮಾವನ್ನು ಟಿವಿಯಲ್ಲಿ ಬಂದಾಗೆಲ್ಲಾ ನಗು, ನಗುತ್ತಾ ಎಂಜಾಯ್ ಮಾಡುತ್ತಿದ್ದರು. ನಾನು ಅಪ್ಪನ ಜೊತೆ ಆ ಚಿತ್ರ ನೋಡಿ ಎಂಜಾಯ್ ಮಾಡಿದ್ದೇನೆ.  ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆ ನಿರ್ದೇಶಕರ ಜೊತೆ ಕೆಲಸ‌ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ ಎಂದರು.

ನಾಯಕಿ ರಚಿತಾ ಮಹಾಲಕ್ಷ್ಮಿ ಮಾತನಾಡಿ, ಇಲ್ಲಿಗೆ ಬಂದಾಗ ಸ್ವಲ್ಪ ಫೀಲಿಂಗ್ ಆಯ್ತು. ರಂಗನಾಯಕ ಸಿನಿಮಾ ಸಮಯದಲ್ಲಿ ಗುರುಪ್ರಸಾದ್ ಸರ್ ಬನ್ನಿ ಕುತ್ಕೊಳ್ಳಿ ಅಂತೆಲ್ಲಾ ಆತಿಥ್ಯ ಮಾಡಿದ್ದು ನೆನಪಾಯ್ತು. ಆ ವ್ಯಕ್ತಿಯನ್ನು ಈ ರೀತಿ ನೋಡಿದ್ದು ಬೇಸರವಾಗುತ್ತಿದೆ. ನಾನು ರಂಗನಾಯಕ ಸಿನಿಮಾಗೂ ಮೊದಲು ಸೈನ್ ಮಾಡಿದ್ದು 
ಎದ್ದೇಳು ಮಂಜುನಾಥ-2 ಸಿನಿಮಾಗೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದು, ಈ ದಾರಿ ಬಹಳ ಸುಲಭವಾಗಿ ಇರಲಿಲ್ಲ. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ ಎಂದರು.

ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ಎದ್ದೇಳು ಮಂಜುನಾಥ್-2 ಸಿನಿಮಾದಿಂದ ಬರುವ ಲಾಭದ 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡಲಾಗುವುದು ಎಂದರು.

ಕಿತ್ತೋದ ಪ್ರೇಮ ಎಂಬ ಹಾಡಿಗೆ ಗುರುಪ್ರಸಾದ್ ಸಾಹಿತ್ಯ ಬರೆದಿದ್ದು , ನವೀನ್ ಸಜ್ಜು ಧ್ವನಿಯಾಗಿದ್ದಾರೆ. ಅನೂಪ್ ಸೀಳಿನ್ ಹಾಡಿಗೆ ಟ್ಯೂನ್ ಹಾಕಿದ್ದಾರೆ. ಚಿತ್ರದಲ್ಲಿ ಗುರುಪ್ರಸಾದ್ ಅವರಿಗೆ ಜೋಡಿಯಾಗಿ ರಚಿತಾ ಮಹಾಲಕ್ಷ್ಮಿ ನಟಿಸಿದ್ದು, ಉಳಿದಂತೆ ಶರತ್  ಲೋಹಿತಾಶ್ವ, ಚೈತ್ರಾ ಆಚಾರ್, ವಿಘ್ನೇಶ್ ಕಟ್ಟಿ, ರವಿ ದೀಕ್ಷಿತ್ ತಾರಾಬಳಗದಲ್ಲಿದ್ದಾರೆ. 

ಎದ್ದೇಳು ಮಂಜುನಾಥ್ 2 ಸಿನಿಮಾಗೆ ಮೈಸೂರು ರಮೇಶ್ ಬಂಡವಾಳ ಹೂಡಿದ್ದು, ರವಿ ದೀಕ್ಷಿತ್  ಕೋ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ. ರಾಮ್ ಮೂವೀಸ್,  ಗುರುಪ್ರಸಾದ್ inc ಹಾಗೂ ಫ್ರೆಂಡ್ಸ್ ಫೋರ್ಮ್ ಬ್ಯಾನರ್ ನಡಿ ಮೂಡಿಬಂದಿರುವ ಈ ಚಿತ್ರಕ್ಕೆ ಅಶೋಕ ಸಾಮ್ರಾಟ್ ಕ್ಯಾಮೆರಾ ಹಿಡಿದಿದ್ದು, ಲಿಂಗರಾಜು ಹಾಗೂ ಉದಯ್ ಸಂಕಲನ ಜವಾಬ್ದಾರಿ ನಿಭಾಯಿಸಿದ್ದು, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News