ಚಾಂಪಿಯನ್‌ ಟ್ರೋಫಿಯಲ್ಲಿ ವಿರಾಟ್‌ ಕೊಹ್ಲಿ-ರೋಹಿತ್‌ ಶರ್ಮಾ ಪ್ರದರ್ಶನ ಹೇಗಿದೆ..?

ICC Champions Trophy 2025: ಚಾಂಪಿಯನ್ಸ್‌ ಟ್ರೋಫಿಯಲ್ಲಿ ರನ್‌ ಮಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದರೆ, ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್‌ ಶರ್ಮಾ 10 ಪಂದ್ಯಗಳನ್ನ ಆಡಿದ್ದಾರೆ. 
 

ICC Champions Trophy 2025: ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಆದರೆ ಇದಕ್ಕೂ ಮುನ್ನ ಈ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾರ ಪ್ರದರ್ಶನ ಎಂಬುದನ್ನು ತಿಳಿದುಕೊಳ್ಳಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ಚಾಂಪಿಯನ್ಸ್‌ ಟ್ರೋಫಿಯಲ್ಲಿ ರನ್‌ ಮಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದರೆ, ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್‌ ಶರ್ಮಾ 10 ಪಂದ್ಯಗಳನ್ನ ಆಡಿದ್ದಾರೆ. 

2 /6

ವಿರಾಟ್‌ ಕೊಹ್ಲಿ ಚಾಂಪಿಯನ್‌ ಟ್ರೋಫಿಯಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳಲ್ಲಿ 529 ರನ್‌ ಕಲೆ ಹಾಕಿದ್ದಾರೆ. ಈ ಟೂರ್ನಿಯಲ್ಲಿ ಅವರ ಗರಿಷ್ಠ ಸ್ಕೋರ್‌ ಅಜೇಯ 96 ರನ್‌ ಆಗಿದೆ.

3 /6

ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇದುವರೆಗೆ ಒಟ್ಟು 10 ಪಂದ್ಯಗಳನ್ನ ಆಡಿದ್ದು, 481 ರನ್‌ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್‌ ಅಜೇಯ 123 ರನ್‌ ಆಗಿದೆ. 

4 /6

ವಿರಾಟ್‌ ಕೊಹ್ಲಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಿರುವ 12 ಇನ್ನಿಂಗ್ಸ್‌ಗಳಲ್ಲಿ ಒಟ್ಟು 5 ಅರ್ಧಶತಕ ದಾಖಲಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು ಒಂದೂ ಶತಕವನ್ನು ಬಾರಿಸಿಲ್ಲ. ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಒಂದು ಶತಕ ಮತ್ತು 4 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 /6

ಚಾಂಪಿಯನ್ಸ್‌ ಟ್ರೋಫಿಯಲ್ಲಿ ವಿರಾಟ್‌ ಕೊಹ್ಲಿ 88.16 ಸರಾಸರಿ ಮತ್ತು 92.32 ಸ್ಟ್ರೈಕ್‌ ರೇಟ್‌ ಹೊಂದಿದ್ದಾರೆ. ರೋಹಿತ್‌ ಶರ್ಮಾ ಅವರು 53.44 ಸರಾಸರಿ ಮತ್ತು 82.50 ಸ್ಟ್ರೈಕ್‌ ರೇಟ್‌ ಹೊಂದಿದ್ದಾರೆ.

6 /6

ವಿರಾಟ್‌ ಕೊಹ್ಲಿ ಇದುವರೆಗೆ ಚಾಂಪಿಯನ್‌ ಟ್ರೋಫಿಯಲ್ಲಿ ಒಟ್ಟು 53 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೋಹಿತ್‌ ಶರ್ಮಾ ಅವರು ಒಟ್ಟು 51 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.