390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ:9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ

ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದೆ. 

Written by - Prashobh Devanahalli | Edited by - Ranjitha R K | Last Updated : Jan 15, 2025, 04:15 PM IST
  • ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಶಂಕುಸ್ಥಾಪನೆ
  • ಬ್ಯಾಟರಿಗಳ ಪ್ರದರ್ಶನವನ್ನು ಕೂಡಾ ಏರ್ಪಡಿಸಲಾಗಿತ್ತು.
  • ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ
390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ:9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ title=

ಬೆಂಗಳೂರು : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.  ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡಾ ಏರ್ಪಡಿಸಲಾಗಿತ್ತು.

ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡಾ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. 

ಇದನ್ನೂ ಓದಿ : ಒಂಟಿಯಾಗಿರುವಾಗ ಹೆಣ್ಣು ಮಕ್ಕಳು ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಮಾಡುವುದು ಇದೇ ವಿಷಯಗಳನ್ನು !ವರದಿಯಲ್ಲಿ ಬಹಿರಂಗವಾದ ಸತ್ಯ

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಭತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಸಚಿವ ಎಂ ಬಿ ಪಾಟೀಲ  ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡಾ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು.

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ : ಫೋನಿನ ಖಾಲಿ ಬಾಕ್ಸ್ ಎಸೆಯುತ್ತೀರಾ? ಅದರಲ್ಲಿದೆ ಈ ರಹಸ್ಯ

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News