ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್.ಬಿ.ತಿಮ್ಮಾಪೂರ

ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ.   

Written by - Prashobh Devanahalli | Edited by - Chetana Devarmani | Last Updated : Jan 17, 2025, 12:42 PM IST
  • ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ
  • ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ
  • ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿಕೆ
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್.ಬಿ.ತಿಮ್ಮಾಪೂರ title=
ಆರ್ ಬಿ ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. 

ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. 

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: ಇಸ್ರೋ ಸ್ಪೇಡೆಕ್ಸ್ ಯೋಜನೆಯ ಯಶಸ್ಸಿಗೆ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅಭಿನಂದನೆ

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ  ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ  ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ. 

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ: ತ್ರಿಕೋನ ಹೋರಾಟ; ಕಾಂಗ್ರೆಸ್ ಪಕ್ಷದ ದಿಗ್ಗಜರ ನಡುವೆ ಹಿಡಿತಕ್ಕಾಗಿ ಜಟಾಪಟಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News