ಗದುಗಿನ ಗ್ರಾಮೀಣ ವಿಶ್ವವಿದ್ಯಾನಿಲಕ್ಕೆ 'ಮಹಾತ್ಮಾ‌ ಗಾಂಧೀಜಿ' ಹೆಸರು

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು.

Written by - Manjunath N | Last Updated : Jan 21, 2025, 03:46 PM IST
  • ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು.
  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ‌ ಪರವಾಗಿ ಅತಿಥಿಗಳನ್ನು ಸನ್ಮಾನಿಸಿ, ಗೌರವಿಸಿದರು.
ಗದುಗಿನ ಗ್ರಾಮೀಣ ವಿಶ್ವವಿದ್ಯಾನಿಲಕ್ಕೆ 'ಮಹಾತ್ಮಾ‌ ಗಾಂಧೀಜಿ' ಹೆಸರು title=

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಈಗ ಗದುಗಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಯಲಯವನ್ನು "ಮಹಾತ್ಮಾ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ" ಎಂದು ಮರುನಾಮಕರಣ‌ ಮಾಡಲಾಗಿದೆ.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ ನೂತನ ಲಾಂಛನವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಗಿದೆ.

*ವಿಶೇಷ ಅಂಚೆ ಚೀಟಿ-ಕೃತಿಗಳ ಬಿಡುಗಡೆ*

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೊರತರಲಾದ "ಗಾಂಧಿ‌ ಭಾರತ-ಮರುನಿರ್ಮಾಣ" ಹಾಗೂ ಉದಯ ಕಾಲ ಸಮೂಹದ ಗಾಂಧಿ ಬಿತ್ತಿದ ಬೆಳಕು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.ಕರ್ನಾಟಕ ಏಕೀಕರಣ ಚಳವಳಿಗೆ ಪ್ರೇರಣೆಯಾಗಿದ್ದ ಹುಯಿಲಗೋಳ ನಾರಾಯಣರಾವ್ ಅವರು ರಚಿಸಿದ " ಉದಯವಾಗಲಿ ನಮ್ಮ ಚೆಲುವು ಕನ್ನಡ‌ ನಾಡು" ಗೀತೆಯನ್ನು ಸಾದ್ವಿನಿ ಕೊಪ್ಪ ಅವರು ಪ್ರಸ್ತುತಪಡಿಸಿದರು.

May be an image of 5 people, monument and text

*ಬಾನಂಗಳಕ್ಕೆ ಚಿಮ್ಮಿದ ರಂಗು*

ಚರಕವನ್ನು ತಿರುಗಿಸುವ ಮೂಲಕ ಮಹಾತ್ಮಾ‌ಗಾಂಧೀಜಿಯವರ ಪ್ರತಿಮೆ‌ ಅನಾವರಣಗೊಳಿಸಿದ ಕೂಡಲೇ‌ ಬಾನಂಗಳಕ್ಕೆ ಚಿಮ್ಮಿದ ಬಣ್ಣದ ಚಿತ್ತಾರ‌ ಮೂಡಿಸಿ, ಚಿತ್ತಾಕರ್ಷಕ ಕಾಮನಬಿಲ್ಲಿನ ವರ್ಣಗಳನ್ನು ಅರಳಿಸಿ, ಪಟಾಕಿ ಹಾರಿಸಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ‌ ಪರವಾಗಿ ಅತಿಥಿಗಳನ್ನು ಸನ್ಮಾನಿಸಿ, ಗೌರವಿಸಿದರು.

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಂದಿಸಿದರು. ಬಿ.ಸಿ.ಭಾನುಮತಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕರ್ನಾಟಕ ರಾಜ್ಯದ ಎಲ್ಲ ಸಚಿವರು, ಶಾಸಕರು, ಅನೇಕ‌ ಸಂಸದರು, ಮಾಜಿ ಶಾಸಕರು ಸೇರಿದಂತೆ ಅನೇಕ ಗಣ್ಯರು, ತೆಲಂಗಾಣದ ಜನಪ್ರತಿನಿಧಿಗಳು ಕುಲಪತಿ ಡಾ.ಸುರೇಶ್ ನಾಡಗೌಡರ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News