ಬೆಂಗಳೂರು : 2025ನೇ ಸಾಲಿನ ಏರ್ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಏರ್ ಶೋ ಹಿನ್ನೆಲೆ ನಾಳೆಯಿಂದ ಫೆಬ್ರವರಿ 17ರವರೆಗೆ ಬರೋಬ್ಬರಿ 26 ದಿನಗಳ ಕಾಲ ಬೆಂಗಳೂರಿನ ವಾಯುಯಾನ ಪ್ರದೇಶ ಮುಚ್ಚಲಾಗುತ್ತಿರುವುದರಿಂದ ಕೆಂಪೇಗೌಡ ಏರ್ಪೋರ್ಟ್ ವಿಮಾನ ಹಾರಾಟದಲ್ಲಿ ವ್ಯತ್ಯಯ ಆಗಲಿದೆ.
ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಏರ್ ಶೋನಿಂದಾಗಿ ಬೆಂಗಳೂರು ಹಾಗೂ ವಾಯುಸೇನೆಗೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಯಲಹಂಕದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ದೇಶ - ವಿದೇಶಗಳಿಂದ ಆಗಮಿಸುತ್ತಾರೆ. ಅಲ್ಲದೆ ವಿಮಾನಯಾನ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆ ಆಗುತ್ತದೆ. ಹೊಸ ತಂತ್ರಜ್ಞಾನದ ಪರಿಚಯ ಹಾಗೂ ತಂತ್ರಜ್ಞಾನದ ವಿನಿಮಯವಾಗುತ್ತೆ, ಇದೆಲ್ಲ ಒಂದೆಡೆಯಾದರೆ ಏರ್ ಶೋ ನಿಂದಾಗಿ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ : ಕನಿಷ್ಟ ಬೆಂಬಲ ಬೆಲೆ ಯೋಜನೆ ಜಾರಿಗೆ ತರಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಹೌದು, ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ - 2025 ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎಎಲ್) ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಏರ್ ಶೋನಿಂದ ಕೆಐಎಎಲ್ನಲ್ಲಿ ವಿಮಾನಗಳ ಕಾರ್ಯಾಚರಣೆಗೆ ತಾತ್ಕಾಲಿಕ ಅಡಚಣೆ ಉಂಟಾಗಲಿದೆ. ಏಷ್ಯಾದ ಪ್ರಮುಖ ಮಿಲಿಟರಿ ವೈಮಾನಿಕ ಪ್ರದರ್ಶನದಿಂದ 10 ದಿನಗಳ ಅವಧಿಯಲ್ಲಿ ಒಟ್ಟಾರೆ 47 ತಾಸು ಕಾಲ ವಿಮಾನ ಸಂಚಾರದಲ್ಲಿ ಬದಲಾವಣೆ ಆಗಲಿದೆ ಎಂದು ಪ್ರಕಟಣೆ ಹೇಳಿದೆ.
ನಿಗದಿತ ಅವಧಿಯಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯುಪ್ರದೇಶವನ್ನು ಕ್ಲೋಸ್ ಮಾಡಲಾಗುತ್ತದೆ. ಹೀಗಾಗಿ ವಿಮಾನಗಳ ಕಾರ್ಯಾಚರಣೆಗಳು ವ್ಯತ್ಯಯವಾಗಬಹುದು. ಇದರಿಂದ ಪ್ರಯಾಣಿಕರು ತಮ್ಮ ನಿಗದಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಕೆಂಪೇಗೌಡ ಏರ್ಪೋರ್ಟ್ ತಿಳಿಸಿದೆ.
ಇದನ್ನೂ ಓದಿ : EPFO: ಇನ್ಮುಂದೆ ಇಪಿಎಫ್ಒ ಸದಸ್ಯರ ಪ್ರೊಫೈಲ್ ನವೀಕರಣ ಮತ್ತಷ್ಟು ಸುಲಭ ..!
ವಿಮಾನ ಹಾರಾಟ ವ್ಯತ್ಯಯದ ಸಮಯ :
* ಫೆಬ್ರುವರಿ 5 ರಿಂದ 8 ವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5ರವರೆಗೆ..
* ಫೆಬ್ರುವರಿ 9 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ
* ಫೆಬ್ರುವರಿ 10 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2ರಿಂದ 4ರವರೆಗೆ
* ಫೆಬ್ರುವರಿ 11 ಹಾಗೂ 12 ರಂದು ಮಧ್ಯಾಹ್ನ 12ರಿಂದ 3ರವರೆಗೆ
* ಫೆಬ್ರವರಿ 13 ರಿಂದ 14 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5ರವರೆಗೆ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.