ರತ್ಲಾಮ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಶಿವಲಿಂಗದ ಮೇಲೆ ಕಾಲು ಇಟ್ಟು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ಕ್ರಿಮಿನಲ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ಖಚಿತಪಡಿಸಿದ್ದಾರೆ.
ಆ ವ್ಯಕ್ತಿಯ ಬಂಧನದ ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಆಕ್ರೋಶಗೊಂಡ ಜನರ ಗುಂಪು ಹಲ್ಲೆ ನಡೆಸಿದೆ. ಪೊಲೀಸರು ತ್ವರಿತವಾಗಿ ಮಧ್ಯಪ್ರವೇಶಿಸಿ, ಅವರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆದೊಯ್ದು ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ.. ವರದಿಗಳ ಪ್ರಕಾರ ಆರೋಪಿಯನ್ನು ಇಮ್ರಾನ್ ಸುಕ್ಕಾ ಎಂದು ಗುರುತಿಸಲಾಗಿದೆ. ಅವರು ಶಿವಲಿಂಗದ ಮೇಲೆ ತಮ್ಮ ಪಾದವನ್ನಿಟ್ಟು ಸಿಗರೇಟ್ ಸೇದುವ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಜನವರಿ 29 (ಬುಧವಾರ) ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
Jihadi Imran of Ratlam, MP posted his video of putting his foot on Shivling, arrested pic.twitter.com/Dgso6tOI4B
— Frontalforce 🇮🇳 (@FrontalForce) January 30, 2025
ಇದನ್ನೂ ಓದಿ-ಸಿಗರೇಟ್ ಸೇದಿದ್ರೆ ಆ ನಿಮ್ಮ ಅಂಗ ಕೆಲಸ ಮಾಡಲ್ಲ..! ಎಚ್ಚರ.. ಅದು ನಿಮಗೆ ಬಹಳ ಮುಖ್ಯ..
ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸದಸ್ಯರು ರೀಲ್ನ ಸ್ಕ್ರೀನ್ಶಾಟ್ನೊಂದಿಗೆ ರತ್ಲಾಮ್ನ ಸ್ಟೇಷನ್ ರಸ್ತೆ ಪೊಲೀಸ್ ಠಾಣೆಗೆ ತಲುಪಿ.. ಅದನ್ನು ಪುರಾವೆಯಾಗಿ ಪೊಲೀಸರಿಗೆ ನೀಡಿ, ತಕ್ಷಣ ಕ್ರಮಕ್ಕೆ ಒತ್ತಾಯಿಸಿದ್ದು, ಅವರು ಉದ್ದೇಶಪೂರ್ವಕವಾಗಿ ಹಿಂದೂ ದೇವರನ್ನು ಅವಮಾನಿಸಿದ್ದಾರೆ ಆರೋಪಿಸಲಾಗಿದೆ..
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅಲ್ಲದೇ ಈ ವಿಡಿಯೋ ಹಿಂದೂ ಸಮುದಾಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ನೆಟಿಜನ್ಗಳು ಸಹ ಒತ್ತಾಯಿಸುತ್ತಿದ್ದಾರೆ.. ಪ್ರಕರಣದಲ್ಲಿ ಬಂಧಿತನಾಗಿರುವ ವ್ಯಕ್ತಿಯ ವಿರುದ್ಧ ಈ ಹಿಂದೆ ಮನಕ್ ಚೌಕ್ ಮತ್ತು ಸ್ಟೇಷನ್ ರಸ್ತೆ ಪೊಲೀಸ್ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.. ಈ ಘಟನೆಗೆ ಕೆಲವೇ ದಿನಗಳ ಮೊದಲು ಇಮ್ರಾನ್ ಜೈಲಿನಿಂದ ಬಿಡುಗಡೆಯಾಗಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ-ಸಿಗರೇಟ್ ಸೇದಿದ್ರೆ ಆ ನಿಮ್ಮ ಅಂಗ ಕೆಲಸ ಮಾಡಲ್ಲ..! ಎಚ್ಚರ.. ಅದು ನಿಮಗೆ ಬಹಳ ಮುಖ್ಯ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.