ಬಜೆಟ್‌ಗೂ ಮುನ್ನ ಗ್ರಾಹಕರಿಗೆ ಸಿಹಿ ಸುದ್ದಿ.. ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ !

gas cylinder price: ಪ್ರತಿ ತಿಂಗಳ 01 ನೇ ತಾರೀಖಿನಂದು ಗ್ಯಾಸ್ ಸಿಲಿಂಡರ್ ಬೆಲೆಗಳು ಬದಲಾಗುತ್ತವೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸುತ್ತವೆ. 

Written by - Chetana Devarmani | Last Updated : Feb 1, 2025, 08:13 AM IST
    • ಬಜೆಟ್‌ಗೂ ಮುನ್ನ ಗ್ರಾಹಕರಿಗೆ ಸಿಹಿ ಸುದ್ದಿ
    • ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ !
    • ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ
ಬಜೆಟ್‌ಗೂ ಮುನ್ನ ಗ್ರಾಹಕರಿಗೆ ಸಿಹಿ ಸುದ್ದಿ.. ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ ! title=
gas cylinder price

gas cylinder price: ಪ್ರತಿ ತಿಂಗಳ 01 ನೇ ತಾರೀಖಿನಂದು ಗ್ಯಾಸ್ ಸಿಲಿಂಡರ್ ಬೆಲೆಗಳು ಬದಲಾಗುತ್ತವೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸುತ್ತವೆ. ಫೆಬ್ರವರಿ 1 ರಂದು ಸಹ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು 14 ಕೆಜಿ ಡೊಮೆಸ್ಟಿಕ್ ಮತ್ತು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು‌ ಬಿಡುಗಡೆ ಮಾಡಿವೆ. 

ಪ್ರತಿ ತಿಂಗಳ 1 ನೇ ತಾರೀಖಿನಂದು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇರುತ್ತದೆ. ಇದು ಸಿಎನ್‌ಜಿ ಮತ್ತು ಪಿಎನ್‌ಜಿ ಬೆಲೆಗಳನ್ನು ನಿರ್ಧರಿಸುತ್ತದೆ. ದೇಶದ ಬಜೆಟ್‌ಗೆ ಮುಂಚಿತವಾಗಿ ಸಾಮಾನ್ಯ ಜನರಿಗೆ  ಒಳ್ಳೆಯ ಸುದ್ದಿ ಸಿಕ್ಕಿದೆ. ಫೆಬ್ರವರಿ 1 ರ ಮುಂಜಾನೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಮತ್ತೊಮ್ಮೆ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿವೆ. 

ಇದನ್ನೂ ಓದಿ: Union Budget 2025 Live Updates: ಇಂದು ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌.. ತೆರಿಗೆಯಲ್ಲಿ ಸಿಗುತ್ತಾ ಬಹುದೊಡ್ಡ ವಿನಾಯಿತಿ! ಕ್ಷಣ ಕ್ಷಣದ ಮಾಹಿತಿ ನಿಮ್ಮ ಮುಂದೆ

ಅದೇ ಸಮಯದಲ್ಲಿ OMCಗಳು ಇಂಧನದ ಬೆಲೆಯನ್ನು ತೀವ್ರವಾಗಿ ಹೆಚ್ಚಿಸಿವೆ. ಈ ಕಾರಣದಿಂದಾಗಿ ವಿಮಾನ ಪ್ರಯಾಣ ದುಬಾರಿಯಾಗಬಹುದು. ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ಎಟಿಎಫ್‌ನ ಹೊಸ ಬೆಲೆಗಳು ಇಂದಿನಿಂದ, ಅಂದರೆ ಫೆಬ್ರವರಿ 1 ರಿಂದ ದೇಶಾದ್ಯಂತ ಜಾರಿ ಆಗಲಿವೆ.

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಎಷ್ಟು ಕಡಿಮೆಯಾಗಿದೆ?

ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಸತತ ಎರಡನೇ ತಿಂಗಳು ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 7 ರೂಪಾಯಿ ಇಳಿಕೆಯಾಗಿದ್ದು, 1,797 ರೂಪಾಯಿ ತಲುಪಿದೆ. ಕೋಲ್ಕತ್ತಾದಲ್ಲಿ ಕನಿಷ್ಠ ಬೆಲೆ ಇಳಿಕೆ 4 ರೂ. ಆಗಿದ್ದು ಬೆಲೆ 1907 ರೂ. ಆಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 6.5 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಅದಾದ ನಂತರ ಎರಡೂ ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳು ಕ್ರಮವಾಗಿ 1749.50 ರೂ. ಮತ್ತು 1959.50 ರೂ. ಆಗಿವೆ. ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಮತ್ತೊಂದೆಡೆ, ಸತತ 11 ನೇ ತಿಂಗಳು ದೇಶೀಯ ಗೃಹಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಕೊನೆಯ ಬದಲಾವಣೆ ಮಾರ್ಚ್ 2024 ರಲ್ಲಿ ಆಗಿತ್ತು. ಅಂದಿನಿಂದ ದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್‌ನ ಬೆಲೆ 803 ರೂ. ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಮತ್ತು ಹೈದರಾಬಾದ್‌ನಲ್ಲಿ 855 ರೂ. ಆಗಿದೆ.

ಇದನ್ನೂ ಓದಿ: ಈರುಳ್ಳಿ ಸಿಪ್ಪೆಗೆ ಈ ಒಂದು ವಸ್ತು ಬೆರೆಸಿ ತಲೆಗೆ ಹಚ್ಚಿ.. ಒಂದೇ ವಾರದಲ್ಲಿ ಬಿಳಿ ಕೂದಲು ಬುಡ ಸಮೇತ ಕಡು ಕಪ್ಪಾಗಿ ದಷ್ಟಪುಷ್ಟವಾಗಿ ಬೆಳೆಯುತ್ತದೆ!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News