ಕೌಲಾಲಂಪುರದಲ್ಲಿ ನಡೆದ ಅಂಡರ್ 19 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ 9 ವಿಕೆಟ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣಾ ಆಫ್ರಿಕಾ ತಂಡವು 20 ಓವರ್ ಗಳಲ್ಲಿ ಕೇವಲ 82 ರನ್ ಗಳಿಗೆ ಆಲೌಟ್ ಆಯಿತು.ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಜಿ.ತ್ರಿಶಾ ಮೂರು ವಿಕೆಟ್ ಗಳನ್ನು ಹಾಗೂ ಆಯುಷಿ ಶುಕ್ಲಾ, ವೈಷ್ಣವಿ ಶರ್ಮಾ ಹಾಗೂ ಪರಿನಿಕಾ ಸಿಸೋದಿಯಾ ತಲಾ ಎರಡು ವಿಕೆಟ್ ಗಳನ್ನೂ ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
Congratulations to @BCCI on back-to-back @ICC U19 Women’s T20 World Cup titles. And kudos to all the participating teams who took part in this very successfully hosted tournament by @MalaysiaCricket - crucial to the global development of the women’s game #U19WorldCup. pic.twitter.com/8EOTVfTLCH
— ICC (@ICC) February 2, 2025
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಈ ಜ್ಯೂಸ್ ಕುಡಿಯಿರಿ..! ಎಂದಿಗೂ ತಲೆ ಬೋಳಾಗುವುದಿಲ್ಲ
ದಕ್ಷಿಣ ಆಫ್ರಿಕಾ ತಂಡವು ನೀಡಿದ 83 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಜಿ ತ್ರಿಶಾ 44, ಹಾಗೂ ಸಾನಿಕಾ ಚಲ್ಕೆ 26 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಅಂತಿಮವಾಗಿ ಟೀಮ್ ಇಂಡಿಯಾ 11.2 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ತಂಡವನ್ನು ಗೆಲುವಿನ ದಡ ಸೇರಿತು.ಆ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.