ದಿನಭವಿಷ್ಯ 04-02-2025: ರಥಸಪ್ತಮಿಯಂದು ಅಶ್ವಿನಿ ನಕ್ಷತ್ರದಲ್ಲಿ ಶುಭ ಯೋಗ, ಈ ರಾಶಿಯವರಿಗೆ ಅದೃಷ್ಟ, ಮನೆ, ವಾಹನ ಖರೀದಿ ಯೋಗ

Today Horoscope 04th February 2025: ಸೌರ ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಮಂಗಳವಾರ, ಅಶ್ವಿನಿ ನಕ್ಷತ್ರ, ಶುಭ ಯೋಗ, ಗರಜ ಕರಣ. ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Feb 4, 2025, 07:48 AM IST
  • ಸೌರ ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಮಂಗಳವಾರ
  • ಇಂದು ಅಶ್ವಿನಿ ನಕ್ಷತ್ರ, ಶುಭ ಯೋಗ, ಗರಜ ಕರಣ.
  • ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ದಿನಭವಿಷ್ಯ 04-02-2025:  ರಥಸಪ್ತಮಿಯಂದು  ಅಶ್ವಿನಿ ನಕ್ಷತ್ರದಲ್ಲಿ ಶುಭ ಯೋಗ, ಈ ರಾಶಿಯವರಿಗೆ ಅದೃಷ್ಟ, ಮನೆ, ವಾಹನ ಖರೀದಿ ಯೋಗ  title=

Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಸೌರ ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಮಂಗಳವಾರ, ಅಶ್ವಿನಿ ನಕ್ಷತ್ರ, ಶುಭ ಯೋಗ, ಗರಜ ಕರಣ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.  

ಮೇಷ ರಾಶಿಯವರ ಭವಿಷ್ಯ (Aries Horoscope):  
ಈ ರಾಶಿಯವರಿಗೆ ಇಂದು ಹಣದ ಒಳಹರಿವು ಹೆಚ್ಚಾಗುತ್ತದೆ. ಹೊಸ ವ್ಯವಹಾರ ಆರಂಭಿಸಲು ಶುಭ ದಿನ. ನಿಮ್ಮ ಪ್ರತಿ ಕೆಲಸದಲ್ಲೂ ಸಂಗಾತಿಯಿಂದ ಬೆಂಬಲವನ್ನು ಪಡೆಯುವಿರಿ. ಕೆಲಸದಲ್ಲಿ ಬದಲಾವಣೆ ಸಾಧ್ಯತೆ ಇದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ನಿಮ್ಮ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ಉನ್ನತ ಅಧಿಕಾರಿಗ್ಲೌ ನಿಮ್ಮ ನಡವಳಿಕೆ, ಕೆಲಸದ ದಕ್ಷತೆಯ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ. ಯಾವುದೇ ವಿಚಾರದಲ್ಲಿ ಪರಸ್ಪರ ಚರ್ಚೆಯೂ ಪ್ರಯೋಜನಕಾರಿ ಆಗಿದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ನೀವಿಂದು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಮಕ್ಕಳ ಪ್ರಗತಿಯು ಸಂತೋಷವನ್ನು ತರಲಿದೆ. ಮದುವೆಯಂತಹ ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಉದ್ಯೋಗಸ್ಥರಿಗೆ ವರ್ಗಾವಣೆ ಸಾಧ್ಯತೆ ಇದೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ. ವ್ಯವಹಾರ ವಿಸ್ತರಣೆಗೆ ಒಳ್ಳೆಯ ಅವಕಾಶಗಳನ್ನು ಪಡೆಯುವಿರಿ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚು ಹಣ ವ್ಯಯವಾಗಬಹುದು. ಕೌಟುಂಬಿಕ ಉದ್ವಿಗ್ನತೆ ಸಾಧ್ಯತೆ. 

ಇದನ್ನೂ ಓದಿ- ಶನಿಯ ರಾಶಿಗೆ ಬುಧ ಪ್ರವೇಶ:  ಈ ರಾಶಿಯವರಿಗೆ ಭಾಗ್ಯೋದಯ,  ವೃತ್ತಿ-ವ್ಯವಹಾರದಲ್ಲಿ ಪ್ರಗತಿ, ಬಂಪರ್ ಧನಲಾಭ! 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಬಹು ಕಾಲದಿಂದ ಬಾಕಿ ಉಳಿದಿರುವ ಕೆಲಸದಲ್ಲಿ ವೇಗವನ್ನು ಪಡೆಯುವಿರಿ. ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಶುಭ ಸಮಯ. ವ್ಯಾಪಾರದಲ್ಲಿ ಬಂಪರ್ ಆದಾಯ, ಆಸ್ತಿ, ಮನೆ ಖರೀದಿ ಯೋಗವೂ ಇದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಇದ್ದಕ್ಕಿದ್ದಂತೆ  ನಿಮ್ಮ ಖರ್ಚು ಹೆಚ್ಚಾಬಹುದು. ಸರ್ಕಾರಿ ಕೆಲಸಗಳಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ಕೆಲಸ ವೇಗಗೊಳ್ಳುವುದರಿಂದ ಧನ ಲಾಭ. ಕೌಟುಂಬಿಕ ವ್ಯಾಜ್ಯಗಳು ಬಗೆಹರಿಯಲಿವೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ವ್ಯವಹಾರದಲ್ಲಿ ಲಾಭದಾಯಕ ಪರಿಸ್ಥಿತಿಗಳು ಸೃಷ್ಟಿಯಾಗಳಿವೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ನಿಮ್ಮ ವಿರೋಧಿಗಳು ಸಕ್ರಿಯರಾಗಿರುತ್ತಾರೆ. ಈ ಬಗ್ಗೆ ಜಾಗರೂಕರಾಗಿರಿ. ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿರಿಸಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ನೀವಿಂದು ಪ್ರಭಾವಿ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶ ದೊರೆಯಲಿದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ದೊಡ್ಡ ಸ್ವರೂಪ ಪಡೆಯಬಹುದು. ಕೆಲಸದಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ. 

ಇದನ್ನೂ ಓದಿ- ಪ್ರತಿದಿನ ದೇವಸ್ಥಾನಕ್ಕೆ ಹೋಗುವುದರಿಂದ ಸಿಗುತ್ತೆ ಈ 6 ಪ್ರಮುಖ ಲಾಭ..! 

ಧನು ರಾಶಿಯವರ ಭವಿಷ್ಯ (Sagittarius Horoscope):  
ಹೊಸ ಆದಾಯದ ಮೂಲಗಳು ಸೃಷ್ಟಿಯಾಗಳಿವೆ. ಕುಟುಂಬದಲ್ಲಿ ಶುಭ ಕಾರ್ಯಗಳಿಗೆ ಯೋಜನೆ ರೂಪಿಸಬಹುದು. ರಾಜಕೀಯ ಬದುಕಿನಲ್ಲಿರುವವರಿಗೆ ಹೆಚ್ಚು ಶ್ರಮದಾಯಕವಾದ ದಿನ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಉದ್ಯೋಗದಲ್ಲಿನ ವಿವಾದಗಳು ಬಗೆಹರಿಯಲಿವೆ. ಧಾರ್ಮಿಕ ಕ್ಷೇತ್ರದಲ್ಲಿ ನಂಬಿಕೆಗಳು ಹೆಚ್ಚಾಗಲಿದೆ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಮುದ ನೀಡಲಿದೆ. ಹಣಕಾಸಿನ ಬಿಕ್ಕಟ್ಟಿನಿಂದ ಪರಿಹಾರ ನಿರೀಕ್ಷಿಸಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಕೆಲಸದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಬಹುದು. ಮನೆಗೆ ಅತಿಥಿಗಳ ಆಗಮನವು ಸಂತೋಷವನ್ನು ತರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಕುಟುಂಬದಲ್ಲಿ ತಾಳ್ಮೆಯಿಂದ ವರ್ತಿಸಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ನಿಮಗೆ ವಹಿಸಲಾಗಿರುವ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಇಲ್ಲವೇ ಸಮಸ್ಯೆಗಳು ಹೆಚ್ಚಾಗಬಹುದು. ಅತಿಯಾದ ಕೆಲಸದ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News