Kannada vs Hindi: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕನ್ನಡ-ಹಿಂದಿ ಸಂಘರ್ಷ ಸಖತ್ ಸೌಂಡ್ ಮಾಡುತ್ತಿದೆ. ಕನ್ನಡದಲ್ಲಿ ಆರ್ಡರ್ ಹೇಳಿದ ವ್ಯಕ್ತಿಗೆ ಹೋಟೆಲ್ನಲ್ಲಿದ್ದ ಹಿಂದಿ ಭಾಷಾ ಸಿಬ್ಬಂದಿ ಥಳಿಸಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಭಾಷಿಕರ ಹಾವಳಿ ಮಿತಿ ಮೀರುತ್ತಿದೆ. ತಮ್ಮ ಸ್ವಂತ ನೆಲದಲ್ಲೇ ಕನ್ನಡಿಗರು ಆತಂಕದಿಂದ ಬದುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ನಿದರ್ಶನವೆಂಬಂತೆ ಕನ್ನಡಿಗನನ್ನ ಕೆಲವು ಹೋಟೆಲ್ ಸಿಬ್ಬಂದಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಶ್ರೀರಾಮುಲು ʻಕೈʼ ಹಿಡಿಯುತ್ತಾರೆ ವದಂತಿ ಮಧ್ಯೆ ಚುರುಕು
Brutal Attack on Delivery Boy at Gabru Bistro and Cafe Near Hesaraghatta Road (Opposite Sapthagiri Hospital)
A shocking and distressing incident unfolded at Gabru Bistro and Cafe near Hesaraghatta Road, opposite Sapthagiri Hospital, where a delivery boy was mercilessly attacked… pic.twitter.com/VgVWtCiFAZ
— Karnataka Portfolio (@karnatakaportf) February 3, 2025
ಬೆಂಗಳೂರಿನ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಬಳಿಯ ಸಪ್ತಗಿರಿ ಆಸ್ಪತ್ರೆ ಬಳಿ ಇರೋ Gabru Bistro and Cafe ಹೋಟೆಲ್ಗೆ ತೆರಳಿದ್ದ ಕನ್ನಡಿಗನೊಬ್ಬ ಕನ್ನಡದಲ್ಲಿ ಆರ್ಡರ್ ಹೇಳಿದ್ದಾರೆ. ಇದಕ್ಕೆ ಅಲ್ಲಿದ್ದ ಹೋಟೆಲ್ ಸಿಬ್ಬಂದಿ, ʼನನಗೆ ನೀನು ಹೇಳಿದ್ದು ಅರ್ಥವಾಗಿಲ್ಲ. ಹಿಂದಿಯಲ್ಲಿ ಹೇಳುʼ ಅಂತಾ ಗದರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಗ್ರಾಹಕ ಕನ್ನಡದಲ್ಲಿಯೇ ಮಾತನಾಡುವಂತೆ ಹೇಳಿದ್ದಾನೆ. ಆದರೆ ಹೋಟೆಲ್ ಸಿಬ್ಬಂದಿ, ʼನಾನು ಕನ್ನಡ ಮಾತಾಡಲ್ಲʼ ಎಂದು ಜೋರು ಧ್ವನಿಯಲ್ಲೇ ಅವಾಜ್ ಹಾಕಿ ಹೋಟೆಲ್ನಿಂದ ಹೊರಹೋಗುವಂತೆ ಬೈದಿದ್ದಾನೆ.
ಇದರಿಂದ ಕೋಪಗೊಂಡ ಕನ್ನಡಿಗ ಮತ್ತೆ ಅವರಿಗೆ, ʼಕರ್ನಾಟಕದಲ್ಲಿದ್ದೀರಿ ಕನ್ನಡ ಮಾತನಾಡಿʼ ಅಂತಾ ಹೇಳಿದ್ದಾನೆ. ಈ ವೇಳೆ ಇಬ್ಬರೂ ಪರಸ್ಪರ ಕೊರಳ ಪಟ್ಟಿ ಹಿಡಿದುಕೊಂಡು ಜಗಳವಾಡಿದ್ದಾರೆ. ಇದರಿಂದ ಕೆರಳಿದ ಹೋಟೆಲ್ ಸಿಬ್ಬಂದಿ ತನ್ನ ಸಹೋದ್ಯೋಗಿಗಳೊಂದಿಗೆ ಸೇರಿ ಕನ್ನಡಿಗನನ್ನು ಧರಧರನೇ ಹೋಟೆಲ್ನೊಳಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಕನ್ನಡಿಗ ಮತ್ತು ಹೋಟೆಲ್ ಸಿಬ್ಬಂದಿ ನಡುವಿನ ಗಲಾಟೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಹಣಕೊಟ್ಟು ಸೈಟ್ ಪಡೆಯದ ವ್ಯಕ್ತಿಗೆ ಪರಿಹಾರ ಒದಗಿಸಿಕೊಟ್ಟ ಗ್ರಾಹಕರ ಆಯೋಗ
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕನ್ನಡದ ಬಗ್ಗೆ ಧ್ವನಿ ಎತ್ತಿದವನ ಕುತ್ತಿಗೆ ಪಟ್ಟಿ ಹಿಡಿದು ಹೋಟೆಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹಿಂದಿವಾಲಾಗಳ ಉಪಟಳ ಹೆಚ್ಚಾಗಿದ್ದು, ಕನ್ನಡಿಗರಿಗೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡಿಗನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟಿಜನ್ಸ್ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.