ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು, ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಬಾನಂಗಳವನ್ನು ಕಂಗೊಳಿಸಲು ಬರುತ್ತಿದೆ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ
ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು, ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.