ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೇಕ್‌ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.

Edited by - Bhavishya Shetty | Last Updated : Feb 6, 2025, 06:28 PM IST
    • ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ
    • ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗೌರವಪೂರ್ವಕ ಭೇಟಿ
    • ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ
ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ title=
File Photo

ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು. ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

ಇದನ್ನೂ ಓದಿ: ಪಿಎಫ್ ಬಡ್ಡಿದರದಲ್ಲಿ ಹೆಚ್ಚಳ!ಸರ್ಕಾರದಿಂದ ಹೊರ ಬೀಳಲಿದೆ ಘೋಷಣೆ

ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೇಕ್‌ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.

ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.

ಇದನ್ನೂ ಓದಿ: ಎರಡೇ ನಿಮಿಷದಲ್ಲಿ ಬಿಳಿ ಕೂದಲನ್ನು ಗಾಢ ಕಪ್ಪಾಗಿಸಿ ಕಾಂತಿಯುತವಾಗಿಸುತ್ತೆ ಈ ಎಣ್ಣೆ..!

ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ವಿವರಣೆ ಕೊಟ್ಟರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News