ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

Bengaluru: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು,  ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಬೇಸರ ವ್ಯಕ್ತಪಡಿಸಿದ್ದಾರೆ‌. 

Written by - Zee Kannada News Desk | Last Updated : Feb 6, 2025, 10:11 PM IST
  • ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ
  • ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ ಬಸವರಾಜ ಬೊಮ್ಮಾಯಿ ಬೇಸರ
  • ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ title=

Basavaraj Bommai: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು,  ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಬೇಸರ ವ್ಯಕ್ತಪಡಿಸಿದ್ದಾರೆ‌. 

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌.

ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News