ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಭಾಗಶಃ ರಿಲೀಫ್ ಸಿಕ್ಕಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ೨ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಸಕ್ಷಮ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ.
ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಸದ್ಯಕ್ಕೆ ನಿರಾಳರಾಗಿದ್ದಾರೆ. ಬಂಧನ ಭೀತಿಯಿಂದ ಬಚಾವ್ ಆಗಿದ್ದಾರೆ. ಆದ್ರೆ, ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಿದೆ. ಹೈಕೋರ್ಟ್ ತೀರ್ಪನ್ನು ಬಿಜೆಪಿಗರು ಸ್ವಾಗತಿಸಿದ್ದಾರೆ
ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದ್ದು, ಇದೇ ಪ್ರಕರಣದಲ್ಲಿ ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಸದ್ಯಕ್ಕೆ ಬಿಎಸ್‌ವೈ ನಿರಾಳರಾಗಿದ್ದು, ಸದ್ಯಕ್ಕೆ ಬಂಧನದ ಭೀತಿ ಇಲ್ಲವಾಗಿದೆ. ವಿಚಾರಣಾ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಯಲಿದೆ.
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಆನಂತರ ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ವಜಾ ಮಾಡಬೇಕು ಮತ್ತು ಪ್ರಕರಣದಲ್ಲಿ ತನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಅವರು ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಅಲ್ಲದೇ, ಪೋಕ್ಸೊ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರೂ ಪ್ರತ್ಯೇಕವಾಗಿ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯೂ ಸೇರಿ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇಂದು ಆದೇಶ ಪ್ರಕಟಿಸಿತು.
ತೀರ್ಪಿನಲ್ಲಿ ಏನಿದೆ
* ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಲಾಗಿದೆ
* ಬಿಎಸ್‌ವೈ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ
* ಸಕ್ಷಮ ಕೋರ್ಟ್ ಸಂಜ್ಞೆ ಪರಿಗಣಿಸಿರುವ ಆದೇಶ ವಜಾ (ಯಡಿಯೂರಪ್ಪಗೆ ಸೀಮಿತ)
* ಅಪರಾಧ, ತನಿಖೆ, ಅಂತಿಮ ವರದಿ ಹಾಗೆಯೇ ಉಳಿಯಲಿದೆ
* ಅಂತಿಮ ವರದಿಗೆ ಸಂಬಂಧಿಸಿ ಆದೇಶ ಮಾಡಲು ಮತ್ತೆ ಸಕ್ಷಮ ಕೋರ್ಟ್ಗೆ ಕೇಸ್ ವರ್ಗ
* ಸಂಜ್ಞೆ ಆದೇಶ ಹೊರತುಪಡಿಸಿ ಉಳಿದ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ..
* ಅರ್ಜಿದಾರರು ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.